ಕರ್ನಾಟಕ ಬಿಜೆಪಿಯಲ್ಲಿ ಬದಲಾವಣೆ ಬಿರುಗಾಳಿ: ಯತ್ನಾಳ್ ಸ್ಫೋಟಕ ಹೇಳಿಕೆ

Updated on: Jan 05, 2025 | 4:19 PM

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬದಲಾವಣೆ ಕೂಗು ಕೇಳಿಬರುತ್ತಿದೆ. ಇದರ ಮಧ್ಯ ರಾಜ್ಯ ಬಿಜೆಪಿ ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ ಪ್ರಕ್ರಿಯೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ಕರ್ನಾಟಕ ಬಿಜೆಪಿಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ವಿಜಯೇಂದ್ರ ಬಣ ಹಾಗೂ ಬಸನೌಡ ಪಾಟೀಲ್ ಯತ್ನಾಳ್ ಬಣ ಪರೋಕ್ಷವಾಗಿ ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿವೆ.

ವಿಜಯಪುರ, (ಜನವರಿ 05): ಪಕ್ಷದ ಅಧ್ಯಕ್ಷರ ಆಯ್ಕೆಗೆ ಚುನಾವಣಾ ಪ್ರಕ್ರಿಯೆ ಇದ್ದೇ ಇರುತ್ತೆ. ಈ ವಿಚಾರವಾಗಿ ಪ್ರಹ್ಲಾದ್ ಜೋಶಿ ಹೇಳಿರುವುದು ಸರಿಯಿದೆ. ಯಾರು ಅಧ್ಯಕ್ಷರು ಆಗುತ್ತಾರೆಂಬುದನ್ನು ಕೇಂದ್ರಕ್ಕೆ ಬಿಡುತ್ತೇವೆ. ಈಗ ಇರುವುದು ಹಂಗಾಮಿ ಅಧ್ಯಕ್ಷರು. ಕೇಂದ್ರ ಸಚಿವ ಪ್ರಹ್ಲಾದ್​​​ ಜೋಶಿ ಹೇಳಿಕೆ ನೀಡಿರುವುದು ಸರಿಯಿದೆ. ಪ್ರಹ್ಲಾದ್ ಜೋಶಿ ನಮ್ಮ ಪಕ್ಷದ ನಿಯಮಗಳ ಬಗ್ಗೆ ಹೇಳಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಹೇಳಿದ್ದಾರೆ.

ವಿಜಯಪುರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಜೋಶಿ ಅವರು ನಮ್ಮ ಪಕ್ಷದ ನಿಯಮಗಳ ಬಗ್ಗೆ ಹೇಳಿದ್ದಾರೆ. ಅದನ್ನು ವಿವಾದ ಮಾಡಿದರೆ ಹೇಗೆ ಎಂದು ಪ್ರಶ್ನಿಸಿದ ಯತ್ನಾಳ್, ಚುನಾವಣೆ ಆಗಲ್ಲ. ಸಹಮತ ಮಾಡಿಕೊಂಡು ರಾಜ್ಯಾಧ್ಯಕ್ಷರ ಆಯ್ಕೆ ಮಾಡುವ ಪದ್ದತಿಯಿದೆ. ಚುನಾವಣಾ ಆಯೋಗದ ನಿಬಂಧನೆಗಳು ಇವೆ. ಈ ನಿಬಂಧನೆಗಳನ್ನು ಪಾಲನೆ ಮಾಡಿ ರಾಷ್ಟ್ರೀಯ ಆಧ್ಯಕ್ಷರ ಸೂಚನೆ ಮೇರೆಗೆ ಘೋಷಣೆ ಆಗುತ್ತದೆ. ಜಿಲ್ಲಾ ಘಟಕದ ಆಧ್ಯಕ್ಷರ ಬದಲಾವಣೆಯೂ ಆಗಲಿದೆ ಎಂದ ಬಾಂಬ್ ಸಿಡಿಸಿದರು.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More