ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕೆಂದು ಎರಡು ತಿಂಗಳಿಗೂ ಅಧಿಕ ಸಮಯದಿಂದ ನಿರಶನ ನಡೆಸುತ್ತಿರುವ ಬಸವ ಜಯಮೃತ್ಯುಂಜಯ ಸ್ವಾಮೀಜಿ (Basava Jaya Mruthyunjaya Swamiji) ಅವರು ನಗರದಲ್ಲಿಂದು ಜೆಡಿಎಸ್ ಪಿತಾಮಹ ಹೆಚ್ ಡಿ ದೇವೇಗೌಡರನ್ನು (HD Devegowda) ಅವರ ನಿವಾಸದಲ್ಲಿ ಭೇಟಿಯಾದರು. ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಈ ಸಂದರ್ಭದಲ್ಲಿ ತಮ್ಮ ತಂದೆಯೊಂದಿಗಿದ್ದರು. ಭೇಟಿಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಶ್ರೀಗಳು, ದೇವೇಗೌಡರು ಅನಾರೋಗ್ಯದಲ್ಲಿದ್ದಾಗ ಅವರನ್ನು ಕಂಡು ಮಾತಾಡುವುದು ಸಾಧ್ಯವಾಗಿರಲಿಲ್ಲ. ಹಾಗಾಗಿ, ಕುಮಾರಸ್ವಾಮಿ ಅವರಿಗೆ ವಿಷಯ ತಿಳಿಸಿ ಭೇಟಿಯಾಗಲು ಬಂದಿದ್ದಾಗಿ ಹೇಳಿದರು. ಎಲ್ಲ ಸಮುದಾಯಗಳ ಪರ ಧ್ವನಿಯೆತ್ತುವ ದೇವೇಗೌಡರು ತಾವು ನಡೆಸುತ್ತಿರುವ ಹೋರಾಟಕ್ಕೂ ಧ್ವನಿಗೂಡಿಸಬೇಕೆಂದು ಕೋರಲಾಯಿತು ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ