Enquires former PM’s Health: ಹೆಚ್ ಡಿ ದೇವೇಗೌಡರನ್ನು ಭೇಟಿಯಾಗಿ ತಮ್ಮ ಹೋರಾಟಕ್ಕೆ ಬೆಂಬಲ ಕೋರಿದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ

ಅರುಣ್​ ಕುಮಾರ್​ ಬೆಳ್ಳಿ

Updated on: Mar 18, 2023 | 12:47 PM

ದೇವೇಗೌಡರು ಅನಾರೋಗ್ಯದಲ್ಲಿದ್ದಾಗ ಅವರನ್ನು ಕಂಡು ಮಾತಾಡುವುದು ಸಾಧ್ಯವಾಗಿರಲಿಲ್ಲ. ಹಾಗಾಗಿ, ಕುಮಾರಸ್ವಾಮಿ ಅವರಿಗೆ ವಿಷಯ ತಿಳಿಸಿ ಭೇಟಿಯಾಗಲು ಬಂದಿದ್ದಾಗಿ ಸ್ವಾಮೀಜಿ ಹೇಳಿದರು.

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕೆಂದು ಎರಡು ತಿಂಗಳಿಗೂ ಅಧಿಕ ಸಮಯದಿಂದ ನಿರಶನ ನಡೆಸುತ್ತಿರುವ ಬಸವ ಜಯಮೃತ್ಯುಂಜಯ ಸ್ವಾಮೀಜಿ (Basava Jaya Mruthyunjaya Swamiji) ಅವರು ನಗರದಲ್ಲಿಂದು ಜೆಡಿಎಸ್ ಪಿತಾಮಹ ಹೆಚ್ ಡಿ ದೇವೇಗೌಡರನ್ನು (HD Devegowda) ಅವರ ನಿವಾಸದಲ್ಲಿ ಭೇಟಿಯಾದರು. ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಈ ಸಂದರ್ಭದಲ್ಲಿ ತಮ್ಮ ತಂದೆಯೊಂದಿಗಿದ್ದರು. ಭೇಟಿಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಶ್ರೀಗಳು, ದೇವೇಗೌಡರು ಅನಾರೋಗ್ಯದಲ್ಲಿದ್ದಾಗ ಅವರನ್ನು ಕಂಡು ಮಾತಾಡುವುದು ಸಾಧ್ಯವಾಗಿರಲಿಲ್ಲ. ಹಾಗಾಗಿ, ಕುಮಾರಸ್ವಾಮಿ ಅವರಿಗೆ ವಿಷಯ ತಿಳಿಸಿ ಭೇಟಿಯಾಗಲು ಬಂದಿದ್ದಾಗಿ ಹೇಳಿದರು. ಎಲ್ಲ ಸಮುದಾಯಗಳ ಪರ ಧ್ವನಿಯೆತ್ತುವ ದೇವೇಗೌಡರು ತಾವು ನಡೆಸುತ್ತಿರುವ ಹೋರಾಟಕ್ಕೂ ಧ್ವನಿಗೂಡಿಸಬೇಕೆಂದು ಕೋರಲಾಯಿತು ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.