ಬೆಳಗಾವಿ: ಚನ್ನಮ್ಮ ಸರ್ಕಲ್​ನಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ

ಬೆಳಗಾವಿ: ಚನ್ನಮ್ಮ ಸರ್ಕಲ್​ನಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ

ಅರುಣ್​ ಕುಮಾರ್​ ಬೆಳ್ಳಿ
|

Updated on: Dec 16, 2024 | 2:53 PM

ಸ್ವಾಮೀಜಿಯವರು ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಛತ್ರಪತಿ ಶಿವಾಜಿ ಮಹಾರಾಜ್ ಮತ್ತು ಸಂವಿಧಾನ ಶಿಲ್ಪಿ ಡಾ ಬಿಅರ್ ಅಂಬೇಡ್ಕರ್ ಅವರ ಹೆಸರಲ್ಲಿ ಜಯಘೋಷ ಮಾಡುವುದನ್ನು ವಿಡಿಯೋದಲ್ಲಿ ನೋಡಬಹುದು. ಇವತ್ತು ಸಾಯಂಕಾಲ 4 ಗಂಟೆಗೆ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬೆಳಗಾವಿ ಜಿಲ್ಲಾಧಿಕಾರಿಯವರನ್ನು ಭೇಟಿಯಾಗಲಿದ್ದಾರೆ.

ಬೆಳಗಾವಿ: ಪಂಚಮಸಾಲಿ ಲಿಂಗಾಯತರ ಮೀಸಲಾತಿ ಪ್ರತಿಭಟನೆಗೆ ಜಿಲ್ಲಾಡಳಿತ ಅವಕಾಶ ನೀಡಲ್ಲವೆಂದು ಹೇಳಿದೆ, ಆದರೆ ಹೋರಾಟದ ನೇತೃತ್ವ ವಹಿಸಿರುವ ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರು ಸಮುದಾಯದ ಕೆಲವರೊಡನೆ ನಗರದ ಚೆನ್ನಮ್ಮ ವೃತ್ತದಲ್ಲಿ ಸಾಂಕೇತಿಕ ಧರಣಿ ನಡೆಸಿದರು. ಪ್ರತಿಭಟನೆಕಾರರು ರೈತ ವಿರೋಧಿ ಪುಂಡ ಸರ್ಕಾರಕ್ಕೆ ಧಿಕ್ಕಾರ, ಲಿಂಗಾಯತರ ಮೇಲೆ ಹಲ್ಲೆ ನಡೆಸುವ ಮತ್ತು ಅಮಾಯಕರ ರಕ್ತ ಸುರಿಸುವ ಸರ್ಕಾರ ಸರ್ಕಾರಕ್ಕೆ ಧಿಕ್ಕಾರ ಮತ್ತು ಲಿಂಗಾಯತ ವಿರೋಧಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಧಿಕ್ಕಾರ ಎಂದು ಘೋಷಣೆಗಳನ್ನು ಕೂಗಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಸರ್ಕಾರದ ಯಾವುದೇ ಬೆದರಿಕೆಗೆ ಮಣಿಯಲ್ಲ, ಹೋರಾಟ ಮುಂದುವರಿಯುತ್ತದೆ: ಬಸವ ಜಯ ಮೃತ್ಯುಂಜಯ ಸ್ವಾಮೀಜಿ