‘ಬಸವ ಮಂಟಪ’ ಕೃತಿ ವಿವಾದ: ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಲೇಖಕ ರವಿ ಹಂಜ್ ಕ್ಷಮೆಯಾಚನೆ

Updated on: Nov 20, 2026 | 9:37 AM

ಬಸವಣ್ಣ ಕುರಿತ ಹೇಳಿಕೆಗಳಿಂದ ವೀರಶೈವ ಲಿಂಗಾಯತ ಸಮುದಾಯಕ್ಕೆ ನೋವಾಗಿದ್ದಕ್ಕೆ ಲೇಖಕ ರವಿ ಹಂಜ್ ಕ್ಷಮೆಯಾಚಿಸಿದ್ದಾರೆ. ಎಫ್‌ಐಆರ್ ದಾಖಲಾದ ಬೆನ್ನಲ್ಲೇ ವಿಷಾದ ವ್ಯಕ್ತಪಡಿಸಿದ ಅವರು, ಬಸವ ಮಂಟಪ ಕೃತಿಯನ್ನು ಪ್ರತಿ ಜಿಲ್ಲೆಯಲ್ಲಿ ಮರು ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ. ತಮ್ಮ ಹೇಳಿಕೆಗಳನ್ನು ಕೆಲವರು ತಪ್ಪಾಗಿ ಗ್ರಹಿಸಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು, ನವೆಂಬರ್ 20: ‘ಬಸವ ಮಂಟಪ’ ಕೃತಿಯಲ್ಲಿ ಜಗಜ್ಯೋತಿ ಬಸವಣ್ಣನವರನ್ನು ಅವಹೇಳನ ಮಾಡಲಾಗಿದೆ ಎಂಬ ಆರೋಪಗಳ ಬೆನ್ನಲ್ಲೇ ಕೃತಿಯನ್ನು ಮುಟ್ಟುಗೋಲು ಹಾಕಲು ಕರ್ನಾಟಕ ಸಚಿವ ಸಂಪುಟ ಗುರುವಾರ ಸಮ್ಮತಿಸಿದೆ. ಇದೇ ವೇಳೆ, ಲೇಖಕ ರವಿ ಹಂಜ್, ಕೃತಿ ಪ್ರಕಟಿಸಿದ ಪ್ರಕಾಶನದ ಮಾಲೀಕ ಪತ್ರಕರ್ತ ವಿಶ್ವೇಶ್ವರ್ ಭಟ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ಸಹ ದಾಖಲಾಗಿದೆ. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಲೇಖಕ ರವಿ ಹಂಜ್ ಕ್ಷಮೆಯಾಚಿಸಿದ್ದಾರೆ. ಟಿವಿ ಸಂದರ್ಶನದಲ್ಲಿ ತಾವು ಮಾತನಾಡಿದ್ದನ್ನು ಕೆಲವರು ತಪ್ಪಾಗಿ ಗ್ರಹಿಸಿದ್ದಾರೆ ಎಂದು ರವಿ ಹಂಜ್ ಸ್ಪಷ್ಟಪಡಿಸಿದ್ದಾರೆ.

ತಮ್ಮ ಮಾತುಗಳಿಂದ ವೀರಶೈವ ಲಿಂಗಾಯತ ಬಂಧುಗಳಿಗೆ ನೋವುಂಟಾಗಿದ್ದರೆ ಅದಕ್ಕೆ ವಿಷಾದ ವ್ಯಕ್ತಪಡಿಸುವುದಾಗಿ ಮತ್ತು ಕ್ಷಮೆಯಾಚಿಸುವುದಾಗಿ ಅವರು ತಿಳಿಸಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರ ಪ್ರತಿಕ್ರಿಯೆ ಮತ್ತು ಒತ್ತಾಯಕ್ಕೆ ಸ್ಪಂದಿಸಿದ ರವಿ ಹಂಜ್, ಬಸವ ಮಂಟಪ ಕೃತಿಯನ್ನು ಪ್ರತಿ ಜಿಲ್ಲೆಯಲ್ಲಿ ಮರು ಬಿಡುಗಡೆ ಮಾಡಲು ಸಿದ್ಧವಿರುವುದಾಗಿ ಘೋಷಿಸಿದ್ದಾರೆ. ಸದ್ಯದಲ್ಲೇ ಮರು ಬಿಡುಗಡೆ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ. ಸಾರ್ವಜನಿಕರ ಸಹಕಾರವನ್ನು ನಿರೀಕ್ಷಿಸಿದ್ದು, ಎಲ್ಲರಿಗೂ ಒಳಿತಾಗಲಿ ಎಂದು ಪ್ರಾರ್ಥಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More