ಬಸವ ಮಂಟಪ ವಿವಾದ: ಸಮಗ್ರ ತನಿಖೆಗೆ SIT ರಚಿಸಲು ಜಾಗತಿಕ ಲಿಂಗಾಯತ ಮಹಾಸಭಾ ಆಗ್ರಹ

Updated on: Nov 21, 2026 | 8:03 PM

ಬಸವ ಮಂಟಪ ಕೃತಿ ವಿವಾದದ ಹಿನ್ನೆಲೆಯಲ್ಲಿ ಲೇಖಕ ರವಿ ಹಂಜ್ ಅವರನ್ನು ಕೊಚ್ಚಿಯಲ್ಲಿ ವಶಕ್ಕೆ ಪಡೆಯಲಾಗಿದೆ. ಬಸವಣ್ಣನವರ ಅಸ್ತಿತ್ವವನ್ನು ಪ್ರಶ್ನಿಸಿದ ಮತ್ತು ಆಧಾರರಹಿತ ಆರೋಪಗಳನ್ನು ಮಾಡಿದ ಕೃತಿಯ ವಿರುದ್ಧ ರಾಜ್ಯಾದ್ಯಂತ ತೀವ್ರ ಪ್ರತಿಭಟನೆಗಳು ನಡೆಯುತ್ತಿವೆ. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ SIT ತನಿಖೆಗೆ ಒತ್ತಾಯಿಸಿದೆ. ಸರಕಾರ ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಂಡಿದೆ.

ಬೆಂಗಳೂರು, ನವೆಂಬರ್ 21: ಬಸವ ಮಂಟಪ ಕೃತಿ ವಿವಾದ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಕೃತಿಯ ಲೇಖಕ ರವಿ ಹಂಜ್ ಅವರನ್ನು ಕೇರಳದ ಕೊಚ್ಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ. ವಿದೇಶಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ ಹಂಜ್ ಅವರನ್ನು ಲುಕ್ ಔಟ್ ನೋಟಿಸ್ ಆಧಾರದ ಮೇಲೆ ಏರ್‌ಪೋರ್ಟ್ ಭದ್ರತಾ ಸಿಬ್ಬಂದಿ ಲಾಕ್ ಮಾಡಿದ್ದಾರೆ. ಬೆಳಗಾವಿ ಪೊಲೀಸರು ಕೊಚ್ಚಿಗೆ ತೆರಳಿದ್ದು, ಅವರನ್ನು ವಶಕ್ಕೆ ಪಡೆಯಲು ಸಿದ್ಧತೆ ನಡೆಸಿದ್ದಾರೆ.

ರವಿ ಹಂಜ್ ಅವರ ಬಸವ ಮಂಟಪ ಕೃತಿಯು ವಿಶ್ವಗುರು ಬಸವಣ್ಣನವರ ಅಸ್ತಿತ್ವವನ್ನು ಪ್ರಶ್ನಿಸಿ, ಅವರು ಕಾಲ್ಪನಿಕ ವ್ಯಕ್ತಿ ಎಂದು ಉಲ್ಲೇಖಿಸಿರುವುದು ಹಾಗೂ ಅವರ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಆರೋಪಗಳ ವಿರುದ್ಧ ಬಸವ ಭಕ್ತರು ಮತ್ತು ಲಿಂಗಾಯತ ಸಂಘಟನೆಗಳು ರಾಜ್ಯಾದ್ಯಂತ ತೀವ್ರ ಪ್ರತಿಭಟನೆಗಳನ್ನು ನಡೆಸುತ್ತಿವೆ. ಕಲಬುರಗಿಯಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮತ್ತು ಜಾಗತಿಕ ಲಿಂಗಾಯತ ಮಹಾಸಭಾ ಭಾಗವಹಿಸಿದ್ದವು. ಜಾಗತಿಕ ಲಿಂಗಾಯತ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಜಾಮದಾರ್, ಪ್ರಕರಣದ ಸಮಗ್ರ ತನಿಖೆಗಾಗಿ ವಿಶೇಷ ತನಿಖಾ ತಂಡ (SIT) ರಚಿಸುವಂತೆ ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರವು ಈಗಾಗಲೇ ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಳ್ಳಲು ನಿರ್ಧರಿಸಿದ್ದು, ಸಚಿವರಾದ ಯತೀಂದ್ರ ಸಿದ್ದರಾಮಯ್ಯ ಹಾಗೂ ಎನ್.ಚೆಲುವರಾಯಸ್ವಾಮಿ ಲೇಖಕನ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More