‘ಬಸವ ಮಂಟಪ’ ಪುಸ್ತಕ ವಿವಾದ: ಲೇಖಕ ರವಿ ಹಂಜ್​​ಗೆ ಶಾಕ್ ಕೊಟ್ಟ ಬೆಳಗಾವಿ ಪೊಲೀಸ್ರು

Edited By:

Updated on: Nov 22, 2026 | 6:55 PM

ವಿವಾದಿತ ‘ಬಸವ ಮಂಟಪ’ ಪುಸ್ತಕ ಲೇಖಕ ರವಿ ಹಂಜ್ ವಿರುದ್ಧದ ರಾಜ್ಯಾದ್ಯಂತ ಆಕ್ರೋಶ ಮುಂದುವರೆದಿದ್ದು, ಬಸವಣ್ಣನವರನ್ನು ಅವಹೇಳನ ಮಾಡಿದ ರವಿ ಹಂಜ್ ವಿರುದ್ಧ ಕಠಿಣ ಕ್ರವಾಗಬೇಕೆಂಬ ಆಗ್ರಹಗಳು ವ್ಯಕ್ತವಾಗುತ್ತಿವೆ. ಇನ್ನು ಬೆಳಗಾವಿ ಮಾರ್ಕೆಟ್ ಠಾಣೆಯಲ್ಲೂ ಸಹ ರವಿ ಹಂಜ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಈ ಸಂಬಂಧ ನವೆಂಬರ್ 26ರ ಒಳಗೆ ವಿಚಾರಣೆಗೆ ಹಾಜರಾಗುವಂತೆ ರವಿ ಹಂಜ್​ಗೆ ಇ-ಮೇಲ್ ಮೂಲಕ ನೋಟಿಸ್ ಕಳುಹಿಸಿದ್ದಾರೆ.

ಬೆಳಗಾವಿ, ನವೆಂಬರ್ 22: ವಿವಾದಿತ ‘ಬಸವ ಮಂಟಪ’ ಪುಸ್ತಕ ಲೇಖಕ ರವಿ ಹಂಜ್ ವಿರುದ್ಧದ ರಾಜ್ಯಾದ್ಯಂತ ಆಕ್ರೋಶ ಮುಂದುವರೆದಿದ್ದು, ಬಸವಣ್ಣನವರನ್ನು ಅವಹೇಳನ ಮಾಡಿದ ರವಿ ಹಂಜ್ ವಿರುದ್ಧ ಕಠಿಣ ಕ್ರವಾಗಬೇಕೆಂಬ ಆಗ್ರಹಗಳು ವ್ಯಕ್ತವಾಗುತ್ತಿವೆ. ಇನ್ನು ಬೆಳಗಾವಿ ಮಾರ್ಕೆಟ್ ಠಾಣೆಯಲ್ಲೂ ಸಹ ರವಿ ಹಂಜ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಈ ಸಂಬಂಧ ನವೆಂಬರ್ 26ರ ಒಳಗೆ ವಿಚಾರಣೆಗೆ ಹಾಜರಾಗುವಂತೆ ರವಿ ಹಂಜ್​ಗೆ ಇ-ಮೇಲ್ ಮೂಲಕ ನೋಟಿಸ್ ಕಳುಹಿಸಿದ್ದಾರೆ.

ಬೆಳಗಾವಿ ಪೊಲೀಸರ ಲುಕ್​ಔಟ್ ನೋಟಿಸ್ ಹಿನ್ನೆಲೆ ಕೇರಳದ ಕೊಚ್ಚಿ ಏರ್​ಪೋರ್ಟ್ ಭದ್ರತಾ ಸಿಬ್ಬಂದಿ ರವಿ ಹಂಜ್​​​ರನ್ನು ವಶಕ್ಕೆ ಪಡೆದಿದ್ದರು. ಹೀಗಾಗಿ ಇದೀಗ ಬೆಳಗಾವಿ ಪೊಲೀಸರು, ಏರ್​ಪೋರ್ಟ್ ಭದ್ರತಾ ವಿಭಾಗದ ಮೂಲಕ ರವಿ ಹಂಜ್​ಗೆ ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾದಾಗ ರವಿ ಹಂಜ್​ರನ್ನು ಪೊಲೀಸರು ಬಂಧಿಸುತ್ತಾರಾ ಎನ್ನುವುದು ಕುತೂಹಲ ಮೂಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More