ಬಸವಸಾಗರದಿಂದ ಕೃಷ್ಣಾಗೆ ನೀರು ರಿಲೀಸ್; ಎಚ್ಚರಿಕೆ ನೀಡಿದರೂ ಮೀನು ಹಿಡಿಯಲು ನೀರಿಗೆ ಇಳಿದ ಮೀನುಗಾರರು
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ನದಿ ತೀರಕ್ಕೆ ತೆರಳದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಆದ್ರೆ ಜಿಲ್ಲಾಡಳಿತದ ಸೂಚನೆಗೂ ಕೇರ್ ಮಾಡದೆ ಮೀನುಗಾರರು ಡ್ಯಾಂ ಮುಂಭಾಗದಲ್ಲಿಯೇ ಮೀನು ಹಿಡಿಯಲು ಮುಂದಾಗಿದ್ದಾರೆ.
ಯಾದಗಿರಿ, ಆಗಸ್ಟ್.26: ನಾರಾಯಣಪುರದ ಬಸವಸಾಗರ ಜಲಾಶಯಕ್ಕೆ ಒಳಹರಿವು ಹೆಚ್ಚಿದೆ. ಡ್ಯಾಮ್ನಿಂದ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ನದಿ ತೀರಕ್ಕೆ ಜನರು ಯಾರೂ ತೆರಳದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಆದರೆ ಜಿಲ್ಲಾಡಳಿತದ ಸೂಚನೆಗೂ ಕೇರ್ ಮಾಡದೆ ಮೀನುಗಾರರು ನೀರಿಗೆ ಇಳಿದು ಮೀನುಗಳಿಗೆ ಬಲೆ ಹಾಕುತ್ತಿದ್ದಾರೆ.
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಡ್ಯಾಮ್ನ 25 ಕ್ರಸ್ಟ್ ಗೇಟ್ ಓಪನ್ ಮಾಡಿ ಕೃಷ್ಣಾ ನದಿಗೆ 1,20,800 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಜಲಾಶಯಕ್ಕೆ 1,10,000 ಕ್ಯೂಸೆಕ್ ನೀರು ಒಳಹರಿವು ಬರುತ್ತಿದೆ. 33.33 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಪ್ರಸ್ತುತ 30.83 ಟಿಎಂಸಿ ನೀರು ಸಂಗ್ರಹವಿದೆ. ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚಳ ಹಿನ್ನಲೆ ನೀರು ಬಿಡುಗಡೆ ಪ್ರಮಾಣ ಹೆಚ್ಚಳವಾಗಿದೆ.
ನದಿ ತೀರಕ್ಕೆ ತೆರಳದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಆದ್ರೆ ಜಿಲ್ಲಾಡಳಿತದ ಸೂಚನೆಗೂ ಕೇರ್ ಮಾಡದೆ ಮೀನುಗಾರರು ಡ್ಯಾಂ ಮುಂಭಾಗದಲ್ಲಿಯೇ ಮೀನು ಹಿಡಿಯಲು ಮುಂದಾಗಿದ್ದಾರೆ. ಉಕ್ಕಿ ಹರಿಯುವ ನದಿಯಲ್ಲಿಯೇ ಮೀನು ಹಿಡಿಯುತ್ತಿದ್ದಾರೆ. ಅಪಾಯವನ್ನೂ ಲೆಕ್ಕಿಸದೇ ಮೀನು ಹಿಡಿಯುವ ದುಸ್ಸಾಹಸ ಮಾಡುತ್ತಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ