AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಡ್ಯಾನ್ಸ್​​ ಮಾಡಿದ ಶಾಸಕ ಶರಣು ಸಲಗರ

ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಡ್ಯಾನ್ಸ್​​ ಮಾಡಿದ ಶಾಸಕ ಶರಣು ಸಲಗರ

ಸುರೇಶ ನಾಯಕ
| Edited By: |

Updated on: May 08, 2026 | 3:12 PM

Share

ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಸಾವಿತ್ರಿ ಸಲಗರ ಜೊತೆ ಬಸವಕಲ್ಯಾಣ ಶಾಸಕ ಶರಣು ಸಲಗರ ಹಿಂದಿ ಹಾಡಿಗೆ ಡ್ಯಾನ್ಸ್ ಮಾಡಿ ಗಮನ ಸೆಳೆದಿದ್ದಾರೆ. ಅಭಿಮಾನಿಗಳು, ನೆರೆದವರು ದಂಪತಿ ನೃತ್ಯ ಕಂಡು ಖುಷಿಪಟ್ಟಿದ್ದಲ್ಲದೆ, ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಸವಕಲ್ಯಾಣದ ಖಾಸಗಿ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ ನಡೆದಿತ್ತು ಎನ್ನಲಾಗಿದೆ.

ಬೀದರ್​​, ಮೇ 08: ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದ ಕಾರ್ಯಕ್ರಮದಲ್ಲಿ ಬಸವಕಲ್ಯಾಣದ ಶಾಸಕ ಶರಣು ಸಲಗರ ತಮ್ಮ ಪತ್ನಿ ಜೊತೆಗೆ ಭರ್ಜರಿ ಡ್ಯಾನ್ಸ್​​ ಮಾಡಿ ಗಮನ ಸೆಳೆದಿದ್ದಾರೆ. ಬಸವಕಲ್ಯಾಣದ ಖಾಸಗಿ ಕಲ್ಯಾಣ ಮಂಟಪದಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಶರಣು ಸಲಗರ ದಂಪತಿ ಹಿಂದಿ ಹಾಡಿಗೆ ಸಖತ್​​ ಹೆಜ್ಜೆ ಹಾಕಿದ್ದು ನೆರೆದಿದ್ದವರು ಇವರ ನೃತ್ಯ ಕಂಡು ಫುಲ್​​ ಖುಷ್​​ ಆಗಿದ್ದಾರೆ. ಶರಣು ಸಲಗಾರ ಮತ್ತು ಸಾವಿತ್ರಿ ಸಲಗರ ಅವರ ಈ ಡ್ಯಾನ್ಸ್​​ ಕಂಡು ಅಭಿಮಾನಿಗಳೂ ಸಂತಸಪಟ್ಟಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Suresh Naik
Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More