ತನ್ನನ್ನು ರಾಜ್ಯಾಧ್ಯಕ್ಷ ಮಾಡಿದ್ದು ವರಿಷ್ಠರ ಅತ್ಯುತ್ತಮ ನಿರ್ಣಯ ಅಂತ ಬೊಮ್ಮಾಯಿ ಹೇಳಿದರು: ಬಿವೈ ವಿಜಯೇಂದ್ರ
ಲೋಕ ಸಭಾ ಚುನಾವಣೆ ಹತ್ತಿರದಲ್ಲಿರುವುದರಿಂದ ದೇಶದ ಭವಿಷ್ಯವನ್ನು ಉಜ್ವಲಗೊಳಿಸಲು ರಾಜ್ಯದ ಎಲ್ಲ ಹಿರಿಯ ಮತ್ತು ಕಿರಿಯ ನಾಯಕರನ್ನು ಜೊಗೆಗೂಡಿಸಿಕೊಂಡು ಕೆಲಸ ಮಾಡಬೇಕೆಂದು ಬೊಮ್ಮಾಯಿ ಸಲಹೆ ನೀಡಿದ್ದಾರೆ ಎಂದು ಹೇಳಿದ ವಿಜಯೇಂದ್ರ, ಹೇಳಿದರು.
ಬೆಂಗಳೂರು: ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರನ್ನು ಭೇಟಿಯಾಗಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra), ಬೆಳಕಿನ ಹಬ್ಬದ ಸಂದರ್ಭದಲ್ಲಿ ಹಿರಿಯ ನಾಯಕನ್ನು ಕಂಡು ಮಾತಾಡಿ, ಆಶೀರ್ವಾದ (blessings) ಮತ್ತು ಮಾರ್ಗದರ್ಶನ ಪಡೆದಿರೋದು ಬಹಳ ಸಂತೋಷವೆನಿಸುತ್ತಿದೆ ಎಂದು ಹೇಳಿದರು. ತನ್ನನ್ನು ರಾಜ್ಯಾಧ್ಯಕ್ಷ ಮಾಡುವ ಮೂಲಕ ಕೊನೆಗೂ ಪಕ್ಷದ ವರಿಷ್ಠರು ಒಂದು ಅತ್ಯುತ್ತಮ ನಿರ್ಣಯ ತೆಗೆದುಕೊಂಡಿದ್ದಾರೆ, ತನ್ನನ್ನು ಆಯ್ಕೆ ಮಾಡಿದ್ದು ರಾಜ್ಯ ಬಿಜೆಪಿ ದೊಡ್ಡ ಶಕ್ತಿ ಬಂದಂತಾಗಿದೆ ಎಂದು ಬೊಮ್ಮಾಯಿ ಜೀ ಹೇಳಿದರು ಅಂತ ವಿಜಯೇಂದ್ರ ತಿಳಿಸಿದರು. ಲೋಕ ಸಭಾ ಚುನಾವಣೆ ಹತ್ತಿರದಲ್ಲಿರುವುದರಿಂದ ದೇಶದ ಭವಿಷ್ಯವನ್ನು ಉಜ್ವಲಗೊಳಿಸಲು ರಾಜ್ಯದ ಎಲ್ಲ ಹಿರಿಯ ಮತ್ತು ಕಿರಿಯ ನಾಯಕರನ್ನು ಜೊಗೆಗೂಡಿಸಿಕೊಂಡು ಕೆಲಸ ಮಾಡಬೇಕೆಂದು ಬೊಮ್ಮಾಯಿ ಸಲಹೆ ನೀಡಿದ್ದಾರೆ ಎಂದು ಹೇಳಿದ ವಿಜಯೇಂದ್ರ, ಬುಧವಾರದಂದು ತಾನು ಅಧಿಕೃತವವಾಗಿ ಪಕ್ಷದ ರಾಜ್ಯಾಧ್ಯಕ್ಷನಾಗಿ ಅಧಿಕಾರವಹಿಸಿಕೊಳ್ಳಲಿರುವ ಸಮಾರಂಭಕ್ಕೆ ಅಗಮಿಸಿ ಆಶೀರ್ವದಿಸಬೇಕೆಂದು ಕೋರಿರುವುದಾಗಿ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ

ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ

ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು

ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
