Karnataka Assembly Polls 2023: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಬಿಡುಗಡೆಯಾಗುವ ಸುಳಿವು ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ

Karnataka Assembly Polls 2023: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಬಿಡುಗಡೆಯಾಗುವ ಸುಳಿವು ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ

ಅರುಣ್​ ಕುಮಾರ್​ ಬೆಳ್ಳಿ
|

Updated on:Apr 11, 2023 | 12:11 PM

ಮಾಧ್ಯಮದವರ ಪ್ರಶ್ನೆಗಳನ್ನು ತೆಗೆದುಕೊಳ್ಳುವ ವ್ಯವಧಾನ ಮುಖ್ಯಮಂತ್ರಿಗಳು ಪ್ರಕಟಿಸಲಿಲ್ಲ, ಬಹಳ ಆತುರದಲ್ಲಿದ್ದಂತೆ ಕಂಡುಬಂದರು.

ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಲು 3-4 ದಿನಗಳಿಂದ ದೆಹಲಿಯಲ್ಲಿ ಬೀಡು ಬಿಟ್ಟಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಇಂದು ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ ಇಟ್ಟುಕೊಳ್ಳಬಹುದು ಅಂತ ಮಾಧ್ಯಮ ಪ್ರತಿನಿಧಿಗಳಿಗೆ ಹೇಳಿದರು. ಇಂದು ಬೆಳಗ್ಗೆ ಕರ್ನಾಟಕ ಚುನಾವಣೆಗೆ ಬಿಜೆಪಿ ಉಸ್ತುವಾರಿಯಾಗಿರುವ ಧರ್ಮೇಂದ್ರ ಪ್ರಧಾನ್ (Dharmendra Pradhan) ಜೊತೆ ಚರ್ಚೆ ನಡೆಸಿದ ಬಳಿಕ ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ (Pralhad Joshi) ನಿವಾಸಕ್ಕೆ ತೆರಳಿದರು. ಮಾಧ್ಯಮದವರ ಪ್ರಶ್ನೆಗಳನ್ನು ತೆಗೆದುಕೊಳ್ಳುವ ವ್ಯವಧಾನ ಮುಖ್ಯಮಂತ್ರಿಗಳು ಪ್ರಕಟಿಸಲಿಲ್ಲ, ಬಹಳ ಆತುರದಲ್ಲಿದ್ದಂತೆ ಕಂಡುಬಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Apr 11, 2023 12:11 PM