ಬಸವರಾಜ ಬೊಮ್ಮಾಯಿ ರಾಜ್ಯ ಕಂಡ ಅತ್ಯಂತ ದುರ್ಬಲ ಮತ್ತು ಭ್ರಷ್ಟ ಮುಖ್ಯಮಂತ್ರಿಯಾಗಿದ್ದಾರೆ: ಸಿದ್ದರಾಮಯ್ಯ

Edited By:

Updated on: Jan 10, 2023 | 3:09 PM

ಕೇಂದ್ರ ಸರ್ಕಾರದ ಮುಂದೆ ಹೇಡಿಯಂತೆ ವರ್ತಿಸುವ ಬೊಮ್ಮಯಿ ನಮ್ಮ ರಾಜ್ಯ ಕಂಡ ಅತ್ಯಂತ ದುರ್ಬಲ ಮತ್ತು ಭ್ರಷ್ಟ ಮುಖ್ಯಮಂತ್ರಿಯಾಗಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

Bengaluru:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು (Siddaramaiah) ರಾಜ್ಯದಲ್ಲಿ ಅಡಳಿತರೂಢ ಬಿಜೆಪಿ ಸರ್ಕಾರ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಮೇಲೆ ಟೀಕಾಪ್ರಹಾರವನ್ನು ಮುಂದುವರಿಸಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾ ಗೋಷ್ಟಿಯೊಂದನ್ನು ಉದ್ದೇಶಿಸಿ ಮಾತಾಡಿದ ಸಿದ್ದರಾಮಯ್ಯನವರು ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಹಿಂದಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು (BS Yediyurappa) ಭ್ರಷ್ಟಾಚಾರ ನಡೆಸಿದರು, ಅದನ್ನು ಮುಂದುವರಿಸಿದ ಬೊಮ್ಮಾಯಿ ರಾಜ್ಯಕ್ಕೆ ಕಳಂಕ ತಂದಿದ್ದಾರೆ ಎಂದು ಹೇಳಿದರು. ಕೇಂದ್ರ ಸರ್ಕಾರದ ಮುಂದೆ ಹೇಡಿಯಂತೆ ವರ್ತಿಸುವ ಬೊಮ್ಮಯಿ ನಮ್ಮ ರಾಜ್ಯ ಕಂಡ ಅತ್ಯಂತ ದುರ್ಬಲ ಮತ್ತು ಭ್ರಷ್ಟ ಮುಖ್ಯಮಂತ್ರಿಯಾಗಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ