ಬಸವರಾಜ ಬೊಮ್ಮಾಯಿ ರಾಜ್ಯ ಕಂಡಿರುವ ಅತ್ಯಂತ ದುರ್ಬಲ ಮುಖ್ಯಮಂತ್ರಿ: ಸಿದ್ದರಾಮಯ್ಯ

ಬಸವರಾಜ ಬೊಮ್ಮಾಯಿ ರಾಜ್ಯ ಕಂಡಿರುವ ಅತ್ಯಂತ ದುರ್ಬಲ ಮುಖ್ಯಮಂತ್ರಿ: ಸಿದ್ದರಾಮಯ್ಯ

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Jul 29, 2022 | 1:04 PM

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಮುಖ್ಯಮಂತ್ರಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಕೂಡಲೇ ರಾಜೀನಾಮೆ ನೀಡಬೇಕು ಎಂದು ಸಿದ್ದರಾಮಯ್ಯ ಹೇಳಿದರು.

ಬೆಂಗಳೂರು: ಕರಾವಳಿ ಭಾಗದಲ್ಲಿ ನಡೆಯುತ್ತಿರುವ ಕೊಲೆಗಳ ಬಗ್ಗೆ ಬೆಂಗಳೂರಲ್ಲಿ ಪ್ರತಿಕ್ರಿಯೆ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು (Siddaramaiah), ರಾಜ್ಯದ ಜನರಿಗೆ ಸರ್ಕಾರದ ಮೇಲೆ ವಿಶ್ವಾಸ ಹೋಗಿಬಿಟ್ಟಿದೆ. ಬಸವರಾಜ ಬೊಮ್ಮಾಯಿ (Basavaraj Bommai) ಅವರು ನಮ್ಮ ರಾಜ್ಯ ಕಂಡ ಅತ್ಯಂತ ದುರ್ಬಲ ಮುಖ್ಯಮಂತ್ರಿಯಾಗಿದ್ದಾರೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಮುಖ್ಯಮಂತ್ರಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಕೂಡಲೇ ರಾಜೀನಾಮೆ ನೀಡಬೇಕು ಎಂದು ಸಿದ್ದರಾಮಯ್ಯ ಹೇಳಿದರು.