ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ಪಟ್ಟಕ್ಕೇರಿದ ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ ಇಂದು ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರಚಂದ್ ಗೆಹಲೋತ್ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ದೇವರ ಹೆಸರಿನಲ್ಲಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಬಸವರಾಜ ಬೊಮ್ಮಾಯಿ ಇಂದು ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರಚಂದ್ ಗೆಹಲೋತ್ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ದೇವರ ಹೆಸರಿನಲ್ಲಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪದಗ್ರಹಣ ಸಮಾರಂಭಕ್ಕೆ ಆಗಮಿಸಿದ್ದ ಯಡಿಯೂರಪ್ಪ ಹಾಗೂ ಇತರ ನಾಯಕರು ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸಿದ್ದು, ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವೇದಿಕೆಗೆ ತೆರಳಿ ಹೂಗುಚ್ಛ ನೀಡಿ ಶುಭಾಶಯ ಕೋರಿದ್ದಾರೆ. ಉಳಿದ ಶಾಸಕರು ಕೂಡಾ ಶುಭಾಶಯ ತಿಳಿಸಿದ್ದಾರೆ.
ಬಸವರಾಜ ಬೊಮ್ಮಾಯಿ ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಮುಖ್ಯಮಂತ್ರಿ ಕೊಠಡಿಯ ನಾಮಫಲಕವನ್ನು ಬದಲಾಯಿಸಲಾಗಿದೆ. ಅಂತೆಯೇ, ಬಸವರಾಜ ಬೊಮ್ಮಾಯಿ ನೂತನ ಸಿಎಂ ಆಗಿರುವ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ, ಬೊಮ್ಮಾಯಿ ಅವರನ್ನು ಸಿಎಂ ಮಾಡಿರುವುದು ಹೈಕಮಾಂಡ್. ಎಲ್ಲರ ಸರ್ವಾನುಮತದಿಂದ ಘೋಷಣೆ ಮಾಡಲಾಗಿದೆ. ನಾನು ಸೂಪರ್ ಸಿಎಂ ಟ್ಯಾಗ್ನಿಂದ ಹೊರ ಬಂದಿದ್ದೇನೆ ಎಂದು ಹೇಳಿದ್ದಾರೆ. ಬೇರೆ ಪಕ್ಷದಿಂದ ಬಂದವರನ್ನು ಒಳ್ಳೆಯ ರೀತಿ ನಡೆಸಿಕೊಳ್ತಾರೆ. ಸಚಿವ ಸಂಪುಟದಲ್ಲಿ ಯುವಕರಿಗೆ ಸ್ಥಾನ ಸಿಗುವ ವಿಶ್ವಾಸವಿದೆ ಎಂದಿದ್ದಾರೆ.
ಇದನ್ನೂ ಓದಿ:
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ