ಮುಖ್ಯಮಂತ್ರಿಯಾದ ಬಳಿಕ ಮಾಡುವ ಮೊಟ್ಟ ಮೊದಲ ಕೆಲಸ ಇದು – ಬಸವರಾಜ ಬೊಮ್ಮಾಯಿ

ಸಂಪುಟ ರಚನೆ ಬಗ್ಗೆ ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುತ್ತೇವೆ. ಆ ಬಗ್ಗೆ ಇಂದು ಚರ್ಚೆ ಮಾಡುತ್ತೇವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ಕೊರೊನಾ ಹಾಗೂ ನೆರೆ ಹಾವಳಿ ಪರಿಸ್ಥಿತಿ ಬಗ್ಗೆ ಅವಲೋಕನ ನಡೆಸುವುದಾಗಿ ತಿಳಿಸಿದ್ದಾರೆ.

ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ಬಸವರಾಜ ಬೊಮ್ಮಾಯಿ ಇಂದು ತಾವೊಬ್ಬರೇ ಪ್ರತಿಜ್ಞಾವಿಧಿ ಸ್ವೀಕರಿಸುತ್ತಿರುವುದಾಗಿ ತಿಳಿಸಿದ್ದಾರೆ. ಸಂಪುಟ ರಚನೆ ಬಗ್ಗೆ ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುತ್ತೇವೆ. ಆ ಬಗ್ಗೆ ಇಂದು ಚರ್ಚೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ಕೊರೊನಾ ಹಾಗೂ ನೆರೆ ಹಾವಳಿ ಪರಿಸ್ಥಿತಿ ಬಗ್ಗೆ ಅವಲೋಕನ ನಡೆಸುವುದಾಗಿ ತಿಳಿಸಿದ ಅವರು, ಇಂದು ದೇವಸ್ಥಾನಗಳಿಗೆ ಭೇಟಿ ನೀಡಿ ವರಿಷ್ಠರ ಜತೆ ಮಾತುಕತೆಗೆ ತೆರಳಿದ್ದಾರೆ.

ನಾನು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವುದರಿಂದ ನನ್ನ ಕ್ಷೇತ್ರದ ಜನರು ಬಹಳ ಸಂತಸವಾಗಿದ್ದಾರೆ. ಮುಂದಿನ ದಿನಗಳಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತೇನೆ. ಕ್ಷೇತ್ರದ ಅಭಿವೃದ್ಧಿ ಸದಾಕಾಲ ಮಾಡಿಕೊಂಡು ಬಂದಿದ್ದೇನೆ. ಇನ್ನೂ ವೇಗವಾಗಿ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ. ಈ ಜನ್ಮ ಇರುವವರೆಗೂ ಜನರ ಸೇವೆ ಮಾಡಲು ಸಿದ್ಧ ಎಂದು ಟಿವಿ9ಗೆ ನೂತನ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮಧ್ಯಾಹ್ನ 01 ಗಂಟೆಗೆ ಬಸವರಾಜ ಬೊಮ್ಮಾಯಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ವಿಧಾನಸೌಧದ ಕಾನ್ಫರೆನ್ಸ್ ಹಾಲ್‌ನಲ್ಲಿ ಸುದ್ದಿಗೋಷ್ಠಿ ಏರ್ಪಡಿಸಲಾಗಿದೆ.

ಇದನ್ನೂ ಓದಿ:
ದುರಾಡಳಿತದಿಂದ ದಿಕ್ಕು ತಪ್ಪಿದ ರಾಜ್ಯಕ್ಕೆ ಸ್ನೇಹಿತ ಬೊಮ್ಮಾಯಿ ಸಿಎಂ ಆಗಿದ್ದಾರೆ, ಅವರಿಗೆ ಅಗತ್ಯ ಸಹಕಾರ ನೀಡುತ್ತೇನೆ: ಸಿದ್ದರಾಮಯ್ಯ

Click on your DTH Provider to Add TV9 Kannada