ಮುಸ್ಲಿಮರಿಗೆ ಶೇ 4 ಮೀಸಲಾತಿ: ಸುಪ್ರೀಂ ಕೋರ್ಟ್​ನಲ್ಲಿ ಪ್ರಶ್ನಿಸಲಾಗ್ತಿದೆ ಎಂದ ಬೊಮ್ಮಾಯಿ

Updated on: Mar 18, 2025 | 1:49 PM

ಸರ್ಕಾರದ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇಕಡ 4 ರಷ್ಟು ಮೀಸಲಾತಿ ನೀಡುವ ವಿಚಾರ ಈಗಾಗಲೇ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಪ್ರತಿಪಕ್ಷ ಬಿಜೆಪಿ ಸರ್ಕಾರದ ನಡೆಯನ್ನು ಖಂಡಿಸಿದೆ. ಅಲ್ಲದೆ, ಸುಪ್ರೀಂಕೋರ್ಟಿನಲ್ಲಿ ಪ್ರಶ್ನಿಸುವುದಾಗಿ ಕೂಡ ಹೇಳಿದೆ. ಈ ವಿಚಾರವಾಗಿ ಸಂಸದ ಬಸವರಾಜ ಬೊಮ್ಮಾಯಿ ನೀಡಿರುವ ಹೇಳಿಕೆ ಇಲ್ಲಿದೆ.

ನವದೆಹಲಿ, ಮಾರ್ಚ್ 18: ಹಿಂದುಳಿದ ವರ್ಗಗಳಿಗೆ ಗುತ್ತಿಗೆ ನೀಡುವ ನೆಪದಲ್ಲಿ, ಕರ್ನಾಟಕ ಕಾಂಗ್ರೆಸ್ ಸರ್ಕಾರ ಮುಸ್ಲಿಮರಿಗೆ ಶೇ 4 ಮೀಸಲಾತಿ ಘೋಷಿಸಿದೆ. ಇದನ್ನು ಈಗ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗುತ್ತಿದೆ. ಧರ್ಮಾಧಾರಿತ ಮೀಸಲಾತಿ ಸಂವಿಧಾನಬಾಹಿರ ಎಂದು ಕರ್ನಾಟಕದ ಮಾಜಿ ಸಿಎಂ ಮತ್ತು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರ ಮಾತುಗಳ ವಿಡಿಯೋ ಇಲ್ಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us