ಈ ಬಾರಿ ಬಿಜೆಪಿ ಪರ ಪ್ರಚಾರಕ್ಕೆ ಬರ್ತಾರಾ ಕಿಚ್ಚ ಸುದೀಪ್? ಉತ್ತರಿಸಿದ ಬಸವರಾಜ ಬೊಮ್ಮಾಯಿ

ಈ ಬಾರಿ ಬಿಜೆಪಿ ಪರ ಪ್ರಚಾರಕ್ಕೆ ಬರ್ತಾರಾ ಕಿಚ್ಚ ಸುದೀಪ್? ಉತ್ತರಿಸಿದ ಬಸವರಾಜ ಬೊಮ್ಮಾಯಿ

ರಾಜೇಶ್ ದುಗ್ಗುಮನೆ
|

Updated on: Mar 26, 2024 | 11:13 AM

ಕಿಚ್ಚ ಸುದೀಪ್ ಅವರು ‘ಮ್ಯಾಕ್ಸ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಕಳೆದ ಬಾರಿ ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ ಅವರು ಬಿಜೆಪಿ ಪರ ಪ್ರಚಾರ ಮಾಡಿದ್ದರು. ಈಗ ಲೋಕಸಭೆ ಚುನಾವಣೆ ಸಮೀಪಿಸಿದೆ. ಅವರು ಮತ್ತೆ ಬಿಜೆಪಿ ಪರವಾಗಿ ಪ್ರಚಾರಕ್ಕೆ ಬರುತ್ತಾರಾ ಎಂಬ ಪ್ರಶ್ನೆ ಮೂಡಿದೆ.

ಕಿಚ್ಚ ಸುದೀಪ್ (Kichcha Sudeep) ಅವರು ‘ಮ್ಯಾಕ್ಸ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಕಳೆದ ಬಾರಿ ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ ಅವರು ಬಿಜೆಪಿ ಪರ ಪ್ರಚಾರ ಮಾಡಿದ್ದರು. ಈಗ ಲೋಕಸಭೆ ಚುನಾವಣೆ ಸಮೀಪಿಸಿದೆ. ಅವರು ಮತ್ತೆ ಬಿಜೆಪಿ ಪರವಾಗಿ ಪ್ರಚಾರಕ್ಕೆ ಬರುತ್ತಾರಾ ಎಂಬ ಪ್ರಶ್ನೆ ಮೂಡಿದೆ. ಹಾವೇರಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಮಾತನಾಡಿದ್ದಾರೆ. ‘ರಾಜ್ಯ, ರಾಷ್ಟ್ರ ನಾಯಕರು ಹಾಗೂ ಸೆಲೆಬ್ರಿಟಿಗಳು ಪ್ರಚಾರದಲ್ಲಿ ಭಾಗಿ ಆಗಲಿದ್ದಾರೆ’ ಎಂದು ಬೊಮ್ಮಾಯಿ ಹೇಳಿದ್ದಾರೆ. ‘ಸುದೀಪ್ ಕೂಡ ಬರ್ತಾರಾ’ ಎಂದು ಕೇಳಲಾಯಿತು. ‘ರಾಜ್ಯ ನಾಯಾಕರು ಅದನ್ನು ನಿರ್ಧರಿಸುತ್ತಾರೆ’ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ