ಬೆಂಗಳೂರಿನಲ್ಲಿ ವೈಕುಂಠ ಏಕಾದಶಿ ಸಂಭ್ರಮ ಮನೆಮಾಡಿದೆ. ಈ ಸಂಬಂಧ ಬೆಂಗಳೂರಿನ ವೆಂಕಟೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ನಡೆಯುತ್ತಿದೆ. ಸಹಸ್ರ ಸಂಖ್ಯೆಯಲ್ಲಿ ದೇವಸ್ಥಾನಕ್ಕೆ ಆಗಮಿಸಿರುವ ಭಕ್ತರು ವೆಂಕಟೇಶ್ವರನ ದರ್ಶನ ಪಡೆಯುತ್ತಿದ್ದಾರೆ. ಹಾಗೇನೆ ನಗರದ ಇಸ್ಕಾನ್ ಸೇರಿ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮಾಡಲಾಗುತ್ತಿದ್ದು, ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ ಭಕ್ತರು. ನಾಡಿನ ಜನರ ಜೊತೆಗೆ ಈಗ ಸಿಎಂ ಬಸವರಾಜ ಬೊಮ್ಮಾಯಿ ಕೂಡಾ ವೆಂಕಟೇಶ್ವರ ದರ್ಶನ ಪಡೆದಿದ್ದಾರೆ.