Basavaraj Bommai: ಪುನೀತ್ ರಾಜ್ಕುಮಾರ್ ಮನೆಗೆ ಭೇಟಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ
ಪುನೀತ್ ರಾಜ್ಕುಮಾರ್ ಕುಟುಂಬದವರು ಹಾಲು-ತುಪ್ಪ ಕಾರ್ಯ ನೆರವೇರಿಸಿದ ಬಳಿಕ ಅಪ್ಪು ಸಮಾಧಿ ದರ್ಶನಕ್ಕೆ ಎಲ್ಲರಿಗೂ ಅವಕಾಶ ಮಾಡಿಕೊಡಲಾಯಿತು. ಅಂದಿನಿಂದ ಇಂದಿನವರೆಗೆ ಪ್ರತಿ ದಿನ 20 ಸಾವಿರಕ್ಕೂ ಅಧಿಕ ಅಭಿಮಾನಿಗಳು ಸಮಾಧಿ ಬಳಿ ಬಂದು ನಮನ ಸಲ್ಲಿಸುತ್ತಿದ್ದಾರೆ.
ಪುನೀತ್ ರಾಜ್ಕುಮಾರ್ ಅವರು ನಿಧನರಾಗಿ ಇಂದಿಗೆ (ನವೆಂಬರ್ 8) 11 ದಿನ ಕಳೆದಿದೆ. ಆದರೆ, ಫ್ಯಾನ್ಸ್ ಮನದಲ್ಲಿನ ನೋವು ಕಿಂಚಿತ್ತೂ ಕಡಿಮೆ ಆಗಿಲ್ಲ. ಪ್ರತಿದಿನ ಸಮಾಧಿ ದರ್ಶನಕ್ಕೆ ಸಾವಿರಾರು ಅಭಿಮಾನಿಗಳು ಬರುತ್ತಲೇ ಇದ್ದಾರೆ. ಇಂದು ಪುನೀತ್ ಅವರ 11ನೇ ದಿನದ ಕಾರ್ಯವನ್ನು ನೆರವೇರಿಸಲಾಗಿದೆ. ಡಾ. ರಾಜ್ ಕುಟುಂಬದವರು ಪುನೀತ್ ನಿವಾಸ ಮತ್ತು ಸಮಾಧಿ ಬಳಿ ಪೂಜೆ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮನೆ ಮತ್ತು ಸಮಾಧಿ ಬಳಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಮಧ್ಯಾಹ್ನ 1:45ರ ಸುಮಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುನೀತ್ ಮನೆಗೆ ಭೇಟಿ ನೀಡಿದ್ದಾರೆ. ಒಂದು ಗಂಟೆಗೂ ಅಧಿಕ ಕಾಲ ಇದ್ದು ಅವರು ತೆರಳಿದ್ದಾರೆ.
ಪುನೀತ್ ರಾಜ್ಕುಮಾರ್ ಕುಟುಂಬದವರು ಹಾಲು-ತುಪ್ಪ ಕಾರ್ಯ ನೆರವೇರಿಸಿದ ಬಳಿಕ ಅಪ್ಪು ಸಮಾಧಿ ದರ್ಶನಕ್ಕೆ ಎಲ್ಲರಿಗೂ ಅವಕಾಶ ಮಾಡಿಕೊಡಲಾಯಿತು. ಅಂದಿನಿಂದ ಇಂದಿನವರೆಗೆ ಪ್ರತಿ ದಿನ 20 ಸಾವಿರಕ್ಕೂ ಅಧಿಕ ಅಭಿಮಾನಿಗಳು ಸಮಾಧಿ ಬಳಿ ಬಂದು ನಮನ ಸಲ್ಲಿಸುತ್ತಿದ್ದಾರೆ. ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ನಿಂತು ಅಪ್ಪುಗೆ ನಮಿಸುತ್ತಿದ್ದಾರೆ.
ಇದನ್ನೂ ಓದಿ: ಪುನೀತ್ ಆತ್ಮದ ಜತೆ ಮಾತನಾಡಿದ್ದೇನೆ ಎಂದು ವಿಡಿಯೋ ಹಂಚಿಕೊಂಡ ವ್ಯಕ್ತಿಗೆ ಅಭಿಮಾನಿಗಳ ಛೀಮಾರಿ