AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಮುಖ್ಯಮಂತ್ರಿ ಬದಲಾವಣೆಯಲ್ಲಿ ಬಿಗ್ ಟ್ವಿಸ್ಟ್​​: ಸ್ಫೋಟಕ ಹೇಳಿಕೆ ನೀಡಿದ ರಾಯರೆಡ್ಡಿ

ಕರ್ನಾಟಕದ ಮುಖ್ಯಮಂತ್ರಿ ಬದಲಾವಣೆಯಲ್ಲಿ ಬಿಗ್ ಟ್ವಿಸ್ಟ್​​: ಸ್ಫೋಟಕ ಹೇಳಿಕೆ ನೀಡಿದ ರಾಯರೆಡ್ಡಿ

ಅಕ್ಷಯ್​ ಪಲ್ಲಮಜಲು​​
|

Updated on: May 03, 2026 | 11:10 AM

Share

ಹಿರಿಯ ಶಾಸಕ ಬಸವರಾಜ್ ರಾಯರೆಡ್ಡಿ ಅವರು ರಾಜ್ಯ ಕಾಂಗ್ರೆಸ್‌ನಲ್ಲಿನ ನಾಯಕತ್ವ ಬದಲಾವಣೆ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆಯಾದರೆ ಮಲ್ಲಿಕಾರ್ಜುನ ಖರ್ಗೆ ಅವರೇ ಆ ಸ್ಥಾನವನ್ನು ಭರ್ತಿ ಮಾಡಬೇಕು ಎಂದು ರಾಯರೆಡ್ಡಿ ಹೇಳಿದ್ದು, ಖರ್ಗೆ ಅವರಿಗೆ ಆಹ್ವಾನ ನೀಡಲಾಗಿದೆ ಎಂದು ಬಹಿರಂಗಪಡಿಸಿದ್ದಾರೆ. ಸಿದ್ದರಾಮಯ್ಯ ಅವರ ರಣತಂತ್ರ ಇದಾಗಿದೆ ಎಂದೂ ಅವರು ಉಲ್ಲೇಖಿಸಿದ್ದಾರೆ.

ಬೆಂಗಳೂರು, ಮೇ,3: ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಂಬರುವ ನಾಯಕತ್ವ ಬದಲಾವಣೆ ಮತ್ತು ಸಚಿವ ಸಂಪುಟ ಪುನಾರಚನೆ ಕುರಿತು ಹಿರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ್ ರಾಯರೆಡ್ಡಿ ಮಹತ್ವದ ಹೇಳಿಕೆ ನೀಡಿದ್ದಾರೆ. ಕುರ್ಚಿ ಕದನಕ್ಕೆ ಸಂಬಂಧಿಸಿದಂತೆ ಅವರು “ಸ್ಪೋಟಕ ಟ್ವಿಸ್ಟ್” ನೀಡಿರುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ರಾಯರೆಡ್ಡಿ ಅವರು ನವದೆಹಲಿಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಕರ್ನಾಟಕದ ರಾಜಕೀಯ ಪರಿಸ್ಥಿತಿ ಕುರಿತು ಚರ್ಚಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ಥಾನ ಬದಲಾವಣೆಯಾದರೆ, ಖರ್ಗೆ ಅವರೇ ಮುಖ್ಯಮಂತ್ರಿಯಾಗಬೇಕು ಎಂದು ರಾಯರೆಡ್ಡಿ ಖರ್ಗೆ ಅವರಿಗೆ ಸೂಚಿಸಿದ್ದಾರೆ. ಅಲ್ಲದೆ, ಖರ್ಗೆ ಅವರಿಗೆ ಆಹ್ವಾನ ನೀಡಲಾಗಿದೆ ಎಂದು ರಾಯರೆಡ್ಡಿ ಬಹಿರಂಗಪಡಿಸಿದ್ದಾರೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಣತಂತ್ರದ ಭಾಗ ಎಂದೂ ಅವರು ಹೇಳಿದ್ದಾರೆ. ಪಕ್ಷದ ಅಭಿವೃದ್ಧಿ ಮತ್ತು ಸರ್ಕಾರದ ಸ್ಥಿರತೆಗೆ ಅನಗತ್ಯ ಮುಖ್ಯಮಂತ್ರಿ ಬದಲಾವಣೆ ಮಾತುಗಳು ಹಿನ್ನಡೆಯಾಗಬಹುದು ಎಂದು ರಾಯರೆಡ್ಡಿ ಆತಂಕ ವ್ಯಕ್ತಪಡಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More