ಬಿಗ್ ಬಾಸ್ ಶೋನಿಂದ ಸಿಕ್ಕ ಸಂಭಾವನೆ ಬಗ್ಗೆ ನನಗೆ ಬೇಸರ ಇಲ್ಲ: ಭವ್ಯಾ ಗೌಡ
‘ಖುಷಿಯಾಗಿ ಹೋದೆ, ಖುಷಿಯಾಗಿ ಬಂದೆ. ಸಿಕ್ಕಿರುವ ಪೇಮೆಂಟ್ ಬಗ್ಗೆ ನನಗೆ ಜಾಸ್ತಿ-ಕಡಿಮೆ ಎಂಬ ಬೇಜಾರು ಇಲ್ಲ’ ಎಂದು ಭವ್ಯಾ ಗೌಡ ಅವರು ಹೇಳಿದ್ದಾರೆ. ಮಧ್ಯಮವರ್ಗದಿಂದ ಬಂದಿರುವ ಅವರು ಸಾಕಷ್ಟು ಕಷ್ಟಗಳನ್ನು ನೋಡಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಕೂಡ ಅವರು ಈ ಕುರಿತು ಹೇಳಿಕೊಂಡಿದ್ದರು. ಈ ವಿಡಿಯೋದಲ್ಲಿ ಇನ್ನಷ್ಟು ವಿವರ ನೀಡಿದ್ದಾರೆ.
ಕಿರುತೆರೆಯಲ್ಲಿ ಭವ್ಯಾ ಗೌಡ ಅವರು ತುಂಬ ಜನಪ್ರಿಯತೆ ಹೊಂದಿದ್ದಾರೆ. ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಅವರು ನೂರಾರು ದಿನ ಪೈಪೋಟಿ ನೀಡಿದ್ದರು. ಹಾಗಾಗಿ ಅವರಿಗೆ ಎಷ್ಟು ಸಂಭಾವನೆ ಸಿಕ್ಕಿರಬಹುದು ಎಂಬ ಪ್ರಶ್ನೆ ಎಲ್ಲರಿಗೂ ಇದೆ. ಈ ಬಗ್ಗೆ ಭವ್ಯಾ ಗೌಡ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸಿಕ್ಕ ಸಂಭಾವನೆ ಬಗ್ಗೆ ತಮಗೆ ಬೇಸರ ಇಲ್ಲ ಎಂದು ಅವರು ಹೇಳಿದ್ದಾರೆ. ಟಿವಿ9 ಜೊತೆ ಅವರು ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
