ಬಿಗ್ ಬಾಸ್ ಶೋನಿಂದ ಸಿಕ್ಕ ಸಂಭಾವನೆ ಬಗ್ಗೆ ನನಗೆ ಬೇಸರ ಇಲ್ಲ: ಭವ್ಯಾ ಗೌಡ

Edited By:

Updated on: Jan 31, 2025 | 8:35 PM

‘ಖುಷಿಯಾಗಿ ಹೋದೆ, ಖುಷಿಯಾಗಿ ಬಂದೆ. ಸಿಕ್ಕಿರುವ ಪೇಮೆಂಟ್​ ಬಗ್ಗೆ ನನಗೆ ಜಾಸ್ತಿ-ಕಡಿಮೆ ಎಂಬ ಬೇಜಾರು ಇಲ್ಲ’ ಎಂದು ಭವ್ಯಾ ಗೌಡ ಅವರು ಹೇಳಿದ್ದಾರೆ. ಮಧ್ಯಮವರ್ಗದಿಂದ ಬಂದಿರುವ ಅವರು ಸಾಕಷ್ಟು ಕಷ್ಟಗಳನ್ನು ನೋಡಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಕೂಡ ಅವರು ಈ ಕುರಿತು ಹೇಳಿಕೊಂಡಿದ್ದರು. ಈ ವಿಡಿಯೋದಲ್ಲಿ ಇನ್ನಷ್ಟು ವಿವರ ನೀಡಿದ್ದಾರೆ.

ಕಿರುತೆರೆಯಲ್ಲಿ ಭವ್ಯಾ ಗೌಡ ಅವರು ತುಂಬ ಜನಪ್ರಿಯತೆ ಹೊಂದಿದ್ದಾರೆ. ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಅವರು ನೂರಾರು ದಿನ ಪೈಪೋಟಿ ನೀಡಿದ್ದರು. ಹಾಗಾಗಿ ಅವರಿಗೆ ಎಷ್ಟು ಸಂಭಾವನೆ ಸಿಕ್ಕಿರಬಹುದು ಎಂಬ ಪ್ರಶ್ನೆ ಎಲ್ಲರಿಗೂ ಇದೆ. ಈ ಬಗ್ಗೆ ಭವ್ಯಾ ಗೌಡ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸಿಕ್ಕ ಸಂಭಾವನೆ ಬಗ್ಗೆ ತಮಗೆ ಬೇಸರ ಇಲ್ಲ ಎಂದು ಅವರು ಹೇಳಿದ್ದಾರೆ. ಟಿವಿ9 ಜೊತೆ ಅವರು ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಂಗಳ ರಾಜ್

ಮಂಗಳ ರಾಜ್ ಮೂಲತಃ ಮಧುಗಿರಿ ಬಳಿಯ ರತ್ನಗಿರಿ ರಂಗಾಪುರದವರು. ಇವರು ಸುದ್ದಿ ಮಧ್ಯಮಕ್ಕೆ ಕಾಲಿಟ್ಟು 13 ವರ್ಷಗಳಾಗಿವೆ. ಈಟಿವಿಯಲ್ಲಿ ಇಂಟರ್​ನ್​ಶಿಪ್​ , ಮಧ್ಯಮದ ಅ, ಆ ಇ ಈ ಕಲಿತಿದ್ದು ಕಸ್ತೂರಿ ನ್ಯೂಸ್ 24 ನಲ್ಲಿ ನಂತ್ರ ರಾಜ್ ನ್ಯೂಸ್, ದಿಗ್ವಿಜಯ ನ್ಯೂಸ್ ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. 2021ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮುಂದುವರಿಸಿದ್ದಾರೆ. ಸಿನಿಮಾ ಅಂದ್ರೆ ಬಾಲ್ಯದಿಂದಲೂ ಹುಚ್ಚು. ಅರಸಿ ಬಂದಿದ್ದು ಸಿನಿಮಾ ಜರ್ನಲಿಸ್ಟ್ ಕೆಲಸ. ಸಿನಿಮಾ ಸುದ್ದಿಗಳ ಕವರೇಜ್, ಸಿನಿಮಾ ಹಾಗೂ ಸಿನಿಮಾ ಮಂದಿಯ ವಿವಾದಗಳು, ವಿಮರ್ಶೆ, ಸಿನಿಮಾದವರ ಸಾವು ನೋವು ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವುಗಳ ವರದಿಗಾರಿಕೆ ಇವರ ಕಾಯಕ. ಸಿನಿಮಾ ನೋಡುವುದೇ ಎಲ್ಲಾ ಆಸಕ್ತಿಗಳಿಗಿಂತ ಹೆಚ್ಚು ಆಸಕ್ತಿ.

Read More