Loading video

ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ

|

Updated on: Mar 24, 2025 | 10:10 PM

ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ ಗೌಡ ಮತ್ತು ರಜತ್ ಕಿಶನ್ ಅವರು ರೀಲ್ಸ್ ಮಾಡಲು ಹೋಗಿ ಎಡವಟ್ಟು ಮಾಡಿಕೊಂಡಿದ್ದಾರೆ. ಲಾಂಗ್ ಹಿಡಿದು ರೀಲ್ಸ್ ಮಾಡಿದ್ದಕ್ಕೆ ಅವರ ಮೇಲೆ ಕೇಸ್ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಅವರನ್ನು ವಿಚಾರಣೆಗೆ ಒಳಪಡಿಸಲಾಯಿತು. ಬಳಿಕ ಇಬ್ಬರನ್ನೂ ವಶಕ್ಕೆ ಪಡೆಯಲಾಯಿತು.

‘ಬಿಗ್ ಬಾಸ್ ಕನ್ನಡ’ ರಿಯಾಲಿಟಿ ಶೋ ಮಾಜಿ ಸ್ಪರ್ಧಿಗಳಾದ ವಿನಯ್ ಗೌಡ ಹಾಗೂ ರಜತ್ ಕಿಶನ್ (Rajath Kishan) ಅವರು ರೀಲ್ಸ್ ಮಾಡಲು ಹೋಗಿ ಎಡವಟ್ಟು ಮಾಡಿಕೊಂಡಿದ್ದಾರೆ. ನಿಷೇಧಿತ ಮಾರಕಾಸ್ತ್ರ ಹಿಡಿದುಕೊಂಡು ರೀಲ್ಸ್ ಮಾಡಿದ್ದಕ್ಕೆ ಅವರ ಮೇಲೆ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ವಿನಯ್ ಗೌಡ  (Vinay Gowda) ಮತ್ತು ರಜತ್ ಅವರನ್ನು ವಿಚಾರಣೆಗೆ ಒಳಪಡಿಸಲಾಯಿತು. ಬಳಿಕ ಇಬ್ಬರನ್ನೂ ವಶಕ್ಕೆ ಪಡೆಯಲಾಯಿತು.

​ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.