ಬೆಂಗಳೂರು ರಸ್ತೆಬದಿ ವ್ಯಾಪಾರಿಗಳಿಗೆ ಬಿಬಿಎಂಪಿ ವತಿಯಿಂದ ಸಬ್ಸಿಡಿ ದರದಲ್ಲಿ ತಳ್ಳುಗಾಡಿಗಳು: ಶಿವಕುಮಾರ್

Updated on: Mar 24, 2025 | 3:41 PM

ಏಪ್ರಿಲ್ 30ರೊಳಗೆ ಹೆಸರು ನೋಂದಾಯಿಸಿಕೊಂಡ ವ್ಯಾಪಾರಿಗೆ ಗಾಡಿ ಸಿಗುತ್ತದೆ, ಇದುವರೆಗೆ 27,565 ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ ಮತ್ತು 3,778 ಜನ ತಳ್ಳುಗಾಡಿ ಬೇಕೆದು ಅರ್ಜಿ ಸಲ್ಲಿಸಿದ್ದಾರೆ. ಏಪ್ರಿಲ್ 30 ರ ನಂತರ ಯಾರೂ ರಸ್ತೆಬದಿ ವ್ಯಾಪಾರ ಮಾಡುವಂತಿಲ್ಲ, ಹಾಗಾಗಿ ಸ್ಟ್ರೀಟ್ ವೆಂಡರ್​​​ಗಳು ಅದರೊಳಗಾಗಿ ಹೆಸರು ನೋಂದಾಯಿಸಿಕೊಳ್ಳಬೇಕೆಂದು ಶಿವಕುಮಾರ್ ಹೇಳಿದರು.

ಬೆಂಗಳೂರು, ಮಾರ್ಚ್ 24:  ನಗರದ ರಸ್ತೆಬದಿ ವ್ಯಾಪಾರಿಗಳಿಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ (Bengaluru Development Minister) ಡಿಕೆ ಶಿವಕುಮಾರ್ ಒಂದು ಸಿಹಿಸುದ್ದಿ ನೀಡಿದ್ದಾರೆ. ಸುದ್ದಿಗೋಷ್ಠಿ ನಡೆಸಿದ ಮಾತಾಡಿದ ಅವರು, ಇನ್ನು ಮುಂದೆ ಯಾರೂ ರಸ್ತೆ ಬದಿ ವ್ಯಾಪಾರ ಮಾಡುವಂತಿಲ್ಲ, ಅವರು ಬಿಬಿಎಂಪಿಯಲ್ಲಿ ಹೆಸರನ್ನು ನೋಂದಾಯಿಸಿಕೊಂಡರೆ ತಳ್ಳುವ ಗಾಡಿಗಳನ್ನು ಸಬ್ಸಿಡಿ ದರದಲ್ಲಿ ನೀಡಲಾಗುವುದು, ಮೋಟಾರರ ವಾಹನಗಳು ಸೇರಿದಂತೆ 4-5 ಬಗೆಯ ವಾಹನಗಳನ್ನು ವ್ಯಾಪಾರಿಗಳಿಗೆ ನೀಡುವ ನಿರ್ಧಾರ ಮಾಡಲಾಗಿದೆ, ವ್ಯಾಪಾರಿಗಳು ತಮಗಿಷ್ಟ ಬರುವ ಗಾಡಿಯನ್ನು ಆರಿಸಿಕೊಳ್ಳಬಹುದು ಎಂದು ಹೇಳಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಅಣ್ಣಾಮಲೈ ಪ್ರತಿಭಟನೆ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹಾಸ್ಯಮಯವಾಗಿ ಹೇಳಿದ್ದೇನು!?

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More