ಬಿ.ಸಿ. ಪಾಟೀಲ್ ಸಿನಿಮಾಗೆ ಸೆನ್ಸಾರ್ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಖ್ಯಾತ ಕಲಾವಿದೆ ಬಿ. ಸರೋಜಾದೇವಿ ಅವರು ನಿಧನರಾಗಿದ್ದು, ಬೆಂಗಳೂರಿನಲ್ಲಿ ಬಿ.ಸಿ. ಪಾಟೀಲ್ ಅವರು ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಈ ವೇಳೆ ಅವರು ಮಾಧ್ಯಮಗಳ ಜೊತೆ ಮಾತಾಡಿದರು. ತಮ್ಮ ಮತ್ತು ಬಿ. ಸರೋಜಾದೇವಿ ನಡುವಿನ ಒಡನಾಟದ ಬಗ್ಗೆ ಅವರು ಮಾತನಾಡಿದ ವಿಡಿಯೋ ಇಲ್ಲಿದೆ ನೋಡಿ..
ನಟಿ ಬಿ. ಸರೋಜಾದೇವಿ (B Saroja Devi) ನಿಧನರಾಗಿದ್ದು, ಬಿ.ಸಿ. ಪಾಟೀಲ್ ಅವರು ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಈ ವೇಳೆ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ‘ಸರೋಜಾದೇವಿ ಅವರ ಬಗ್ಗೆ ಮಾತನಾಡಲು ನಾನು ತುಂಬ ಚಿಕ್ಕವನು. ಕರ್ನಾಟಕ ಮಾತ್ರವಲ್ಲದೇ ಇಡೀ ದೇಶದಲ್ಲಿ ಅಭಿನಯ ಮಾಡಿ ಶ್ರೇಷ್ಠ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದ ಮಹಾನ್ ನಟಿ ಅವರು. ಇಂದು ಅವರು ನಮ್ಮಿಂದ ದೂರ ಆಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಅವರ ಜೊತೆ ನಾನು ಯಾವುದೇ ಸಿನಿಮಾಗಳಲ್ಲಿ ನಟಿಸಿಲ್ಲ. ಒಮ್ಮೆ ನಾನು ಸಿನಿಮಾ ನಿರ್ಮಾಣ ಮಾಡಿ, ಸೆನ್ಸಾರ್ ಸಮಸ್ಯೆ ಆದಾಗ ಇದೇ ಮನೆಯಲ್ಲಿ ಅವರನ್ನು ಭೇಟಿ ಮಾಡಿದ್ದೆ. ಆಗ ಅವರು ನಮಗೆ ತುಂಬಾ ಸಹಾಯ ಮಾಡಿದ್ದರು’ ಎಂದು ಬಿ.ಸಿ. ಪಾಟೀಲ್ (BC Patil) ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

