ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
Sunrisers Leeds Abrar Ahmed Buy Sparks Row: ದಿ ಹಂಡ್ರೆಡ್ ಲೀಗ್‌ನಲ್ಲಿ ಸನ್‌ರೈಸರ್ಸ್ ಲೀಡ್ಸ್ ಪಾಕಿಸ್ತಾನಿ ಆಟಗಾರ ಅಬ್ರಾರ್ ಅಹ್ಮದ್ ಅವರನ್ನು ಖರೀದಿಸಿದ್ದು ವಿವಾದ ಸೃಷ್ಟಿಸಿದೆ. ಐಪಿಎಲ್ ಫ್ರಾಂಚೈಸಿ ಸನ್‌ರೈಸರ್ಸ್ ಹೈದರಾಬಾದ್‌ನ ಅಂಗಸಂಸ್ಥೆ ಆಗಿದ್ದರಿಂದ ಅಭಿಮಾನಿಗಳು ಆಕ್ರೋಶಗೊಂಡಿದ್ದಾರೆ. ವಿದೇಶಿ ಲೀಗ್‌ಗಳಲ್ಲಿ ಪಾಕ್ ಆಟಗಾರರ ಖರೀದಿಗೆ ಬಿಸಿಸಿಐಗೆ ಯಾವುದೇ ಸಂಬಂಧವಿಲ್ಲ ಮತ್ತು ಅದು ತನ್ನ ವ್ಯಾಪ್ತಿಗೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಇತರ ಭಾರತೀಯ ಫ್ರಾಂಚೈಸಿಗಳು ಪಾಕ್ ಆಟಗಾರರನ್ನು ಖರೀದಿಸಿಲ್ಲ.
ದಿ ಹಂಡ್ರೆಡ್ ಲೀಗ್‌ನಲ್ಲಿ ಸನ್‌ರೈಸರ್ಸ್ ಲೀಡ್ಸ್ ತಂಡ ಪಾಕಿಸ್ತಾನಿ ಆಟಗಾರ ಅಬ್ರಾರ್ ಅಹ್ಮದ್ ಅವರನ್ನು ಖರೀದಿಸಿದ್ದು ವಿವಾದಕ್ಕೆ ಕಾರಣವಾಗಿದೆ. ಸನ್‌ರೈಸರ್ಸ್ ಲೀಡ್ಸ್ ಐಪಿಎಲ್ ಫ್ರಾಂಚೈಸ್ ಸನ್‌ರೈಸರ್ಸ್ ಹೈದರಾಬಾದ್‌ನ ಅಂಗಸಂಸ್ಥೆಯಾಗಿದೆ. ಹೀಗಾಗಿ ವಿದೇಶಿ ಲೀಗ್‌ನಲ್ಲಿ ಪಾಕಿಸ್ತಾನಿ ಆಟಗಾರನನ್ನು ಖರೀದಿಸಿದ್ದಕ್ಕಾಗಿ ಫ್ರಾಂಚೈಸಿಯ ಮಾಲೀಕರಾದ ಕಾವ್ಯ ಮಾರನ್ ವಿರುದ್ಧ ಭಾರತೀಯರು ಕೋಪಗೊಂಡಿದ್ದು, ಸನ್‌ರೈಸರ್ಸ್ ಗ್ರೂಪ್ ಮೇಲೆ ಟೀಕೆಗಳ ಮಳೆಗರೆದಿದ್ದಾರೆ. ಇದೀಗ ಈ ವಿಷಯಕ್ಕೆ ಸಂಬಂಧಿಸಿದಂತೆ ಬಿಸಿಸಿಐ ಪ್ರತಿಕ್ರಿಯಿಸಿದ್ದು, ವಿದೇಶಿ ಲೀಗ್‌ನಲ್ಲಿ ಯಾವ ತಂಡವು ಯಾವ ಆಟಗಾರನನ್ನು ಖರೀದಿಸುತ್ತದೆ ಎಂಬುದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದಿದೆ.
ಮಾರ್ಚ್ 12 ರಂದು ಇಂಗ್ಲೆಂಡ್‌ನಲ್ಲಿ ನಡೆದ ಹರಾಜಿನಲ್ಲಿ ಕಾವ್ಯಾ ಮಾರನ್ ಒಡೆತನದ ಸನ್‌ರೈಸರ್ಸ್ ಲೀಡ್ಸ್ ತಂಡವು ಪಾಕಿಸ್ತಾನಿ ಸ್ಪಿನ್ನರ್ ಅಬ್ರಾರ್ ಅಹ್ಮದ್ ಅವರನ್ನು 2.3 ಕೋಟಿ ರೂ. ಗೆ ಖರೀದಿಸಿತು. ಸನ್‌ರೈಸರ್ಸ್ ಲೀಡ್ಸ್ ಹೊರತಾಗಿ ಇತರ ಮೂರು ಭಾರತೀಯ ಒಡೆತನದ ಫ್ರಾಂಚೈಸಿಗಳು ಯಾವುದೇ ಪಾಕಿಸ್ತಾನಿ ಆಟಗಾರನನ್ನು ಖರೀದಿ ಮಾಡಲಿಲ್ಲ. ಹೀಗಾಗಿ ಸನ್‌ರೈಸರ್ಸ್ ಲೀಡ್ಸ್ ಫ್ರಾಂಚೈಸಿಯ ನಡೆಯ ಬಗ್ಗೆ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಐಪಿಎಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಬಹಿಷ್ಕರಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.
ಇದೆಲ್ಲದರ ನಡುವೆ ಈ ವಿವಾದದ ಬಗ್ಗೆ ಪ್ರತಿಕ್ರಿಯಿಸಿರುವ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ, ‘ಇದು ಬಿಸಿಸಿಐ ವ್ಯಾಪ್ತಿಯಿಂದ ಹೊರಗಿದೆ. ಬಿಸಿಸಿಐ ನಡೆಸುವ ಐಪಿಎಲ್‌ನಲ್ಲಿ ಪಾಕ್ ಆಟಗಾರರಿಗೆ ಅವಕಾಶವಿಲ್ಲ. ಆದರೆ ವಿದೇಶಿ ಲೀಗ್ ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಹೀಗಾಗಿ ಯಾವ ಲೀಗ್‌ನಲ್ಲಿ ಯಾರು ಏನು ಮಾಡುತ್ತಿದ್ದಾರೆ, ಯಾವ ಆಟಗಾರನನ್ನು ಖರೀದಿಸಿದ್ದಾರೆ ಎಂಬುದು ನಮಗೆ ಬೇಕಿಲ್ಲ. ಇದರಲ್ಲಿ ನಾವು ಹೇಗೆ ಹಸ್ತಕ್ಷೇಪ ಮಾಡಬಹುದು?. ಇದು ನಮಗೆ ಅಪ್ರಸ್ತುತವಾಗುತ್ತದೆ’ ಎಂದಿದ್ದಾರೆ.
ನಾಲ್ಕು ಐಪಿಎಲ್ ಫ್ರಾಂಚೈಸಿಗಳ ಮಾಲೀಕರು ದಿ ಹಂಡ್ರೆಡ್ ಲೀಗ್‌ನಲ್ಲಿ ತಂಡಗಳ ಒಡೆತನ ಹೊಂದಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ನಾರ್ದರ್ನ್ ಸೂಪರ್‌ಚಾರ್ಜರ್ಸ್ (ಈಗ ಸನ್‌ರೈಸರ್ಸ್ ಲೀಡ್ಸ್), ಲಕ್ನೋ ಸೂಪರ್‌ಜೈಂಟ್ಸ್ ಮ್ಯಾಂಚೆಸ್ಟರ್ ಒರಿಜಿನಲ್ಸ್ (ಈಗ ಮ್ಯಾಂಚೆಸ್ಟರ್ ಸೂಪರ್‌ಜೈಂಟ್ಸ್), ಮುಂಬೈ ಇಂಡಿಯನ್ಸ್ ಓವಲ್ ಇನ್ವಿನ್ಸಿಬಲ್ಸ್ (ಈಗ ಎಂಐ ಲಂಡನ್) ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಸಹ-ಮಾಲೀಕ ಜಿಎಂಆರ್ ಸದರ್ನ್ ಬ್ರೇವ್ ತಂಡವನ್ನು ಖರೀದಿಸಿದ್ದಾರೆ. ಇವುಗಳಲ್ಲಿ, ಸನ್‌ರೈಸರ್ಸ್ ಹೈದರಾಬಾದ್ ಮಾತ್ರ ಪಾಕಿಸ್ತಾನಿ ಆಟಗಾರನನ್ನು ಖರೀದಿಸಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್ ಸ್ಪೈಡಿ ಕ್ಯಾಚ್ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ

