IPL 2025: ರೋಹಿತ್ ಶರ್ಮಾಗೆ ವಿಶೇಷ ಸ್ಮರಣಿಕೆ ನೀಡಿ ಗೌರವಿಸಿದ ಬಿಸಿಸಿಐ; ವಿಡಿಯೋ ನೋಡಿ
BCCI Honors Rohit Sharma: 2025ರ ಐಪಿಎಲ್‌ನ 33ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯಕ್ಕೂ ಮುನ್ನ, ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಅವರು ಐಪಿಎಲ್‌ನಲ್ಲಿ 18 ವರ್ಷಗಳ ಕಾಲ ಆಡಿದ್ದಕ್ಕಾಗಿ ರೋಹಿತ್ ಶರ್ಮಾ ಅವರನ್ನು ಗೌರವಿಸಿದರು. ವಿರಾಟ್ ಕೊಹ್ಲಿ ಮತ್ತು ಎಂ.ಎಸ್. ಧೋನಿ ಅವರ ನಂತರ ರೋಹಿತ್ ಶರ್ಮಾ ಈ ಗೌರವಕ್ಕೆ ಪಾತ್ರರಾದರು. ಈ ವರ್ಷ, ಐಪಿಎಲ್‌ನ ಮೊದಲ ಸೀಸನ್‌ನಿಂದ ಆಡುತ್ತಿರುವ ಆಟಗಾರರಿಗೆ ಬಿಸಿಸಿಐ ಈ ವಿಶೇಷ ಗೌರವ ಸಲ್ಲಿಸುತ್ತಿದೆ.
2025ರ ಐಪಿಎಲ್‌ನ 33ನೇ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಸನ್‌ರೈಸರ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ನಡೆಯಿತು. ಈ ಪಂದ್ಯಕ್ಕೂ ಮುನ್ನ, ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ, ಮಾಜಿ ಮುಂಬೈ ನಾಯಕ ರೋಹಿತ್ ಶರ್ಮಾ ಅವರಿಗೆ ವಿಶೇಷ ಸ್ಮರಣಿಕೆ ನೀಡಿ ಗೌರವಿಸಿದರು. ಐಪಿಎಲ್‌ನಲ್ಲಿ 18 ವರ್ಷಗಳನ್ನು ಪೂರೈಸಿದ್ದಕ್ಕಾಗಿ ರೋಹಿತ್‌ಗೆ ಈ ಗೌರವ ಸಲ್ಲಿಸಲಾಯಿತು. ಐಪಿಎಲ್‌ನ ಮೊದಲ ಸೀಸನ್‌ನಿಂದ ರೋಹಿತ್ ಶರ್ಮಾ ಈ ಲೀಗ್‌ನ ಭಾಗವಾಗಿದ್ದಾರೆ. ಆದ್ದರಿಂದ ಲೀಗ್‌ನ 18 ವರ್ಷಗಳನ್ನು ಪೂರ್ಣಗೊಳಿಸಿದ ಸಂದರ್ಭದಲ್ಲಿ ರೋಹಿತ್ ಅವರನ್ನು ಗೌರವಿಸಲಾಯಿತು. ಈ ವರ್ಷ, ಐಪಿಎಲ್‌ನ ಮೊದಲ ಸೀಸನ್‌ನಿಂದ ನಿರಂತರವಾಗಿ ಆಡುತ್ತಿರುವ ಆಟಗಾರರನ್ನು ಬಿಸಿಸಿಐ ಗೌರವಿಸುತ್ತಿದೆ. ಅದರಂತೆ ರೋಹಿತ್ಗೂ ಮೊದಲು ವಿರಾಟ್ ಕೊಹ್ಲಿ ಮತ್ತು ಎಂಎಸ್ ಧೋನಿ ಕೂಡ ಈ ಗೌರವಕ್ಕೆ ಪಾತ್ರರಾಗಿದ್ದರು.
Latest Videos