AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಬಿಡಿಎ ನೌಕರನಿಂದಲೇ ಅಧಿಕಾರಿಗೆ ಧಮ್ಕಿ; ವಿಡಿಯೋ ವೈರಲ್​​

Bengaluru: ಬಿಡಿಎ ನೌಕರನಿಂದಲೇ ಅಧಿಕಾರಿಗೆ ಧಮ್ಕಿ; ವಿಡಿಯೋ ವೈರಲ್​​

Shivaraj
| Edited By: |

Updated on: Feb 12, 2026 | 1:01 PM

Share

ಬೆಂಗಳೂರಿನಲ್ಲಿ ಬಿಡಿಎಯಿಂದ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ, ಬಿಡಿಎ ನೌಕರರ ಸಂಘದ ಅಧ್ಯಕ್ಷ ಮಂಜುನಾಥ್ ಅಧಿಕಾರಿಯೊಬ್ಬರಿಗೆ ಧಮ್ಕಿ ಹಾಕಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಆಯುಕ್ತರ ಆದೇಶವನ್ನು ಪ್ರಶ್ನಿಸಿ ಎಂಜಿನಿಯರ್ ಅಶೋಕ್ ಬಾಗಿ ಜೊತೆ ಗಲಾಟೆ ನಡೆಸಿದ್ದಾರೆ. ಭೂಗಳ್ಳರ ಪರ ನಿಂತಿರುವ ಆರೋಪದ ಮೇಲೆ ಬಿಡಿಎ ಆಯುಕ್ತ ಮಹೇಶ್ವರ್ ರಾವ್ ಶೋಕಾಸ್ ನೋಟಿಸ್ ಜಾರಿಗೊಳಿಸಿ ಕ್ರಮಕ್ಕೆ ಆದೇಶಿಸಿದ್ದಾರೆ.

ಬೆಂಗಳೂರು, ಫೆಬ್ರವರಿ 11: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಡೆಸುತ್ತಿದ್ದ ಒತ್ತುವರಿ ತೆರವು ಕಾರ್ಯಾಚರಣೆಯ ಸಂದರ್ಭದಲ್ಲಿ ಅನಿರೀಕ್ಷಿತ ಘಟನೆಯೊಂದು ನಡೆದಿದೆ. ಬಿಡಿಎ ನೌಕರರ ಸಂಘದ ಅಧ್ಯಕ್ಷ ಮಂಜುನಾಥ್ ಅವರು ಅಧಿಕಾರಿಯೊಬ್ಬರಿಗೆ ಧಮ್ಕಿ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಬಿಡಿಎ ಎಇಇ ಎಂಜಿನಿಯರ್ ಅಶೋಕ್ ಬಾಗಿ ಅವರು ತೆರವು ಕಾರ್ಯಾಚರಣೆ ನಡೆಸುತ್ತಿದ್ದಾಗ, ಆಯುಕ್ತರ ಆದೇಶವನ್ನೇ ಪ್ರಶ್ನಿಸಿ ಮಂಜುನಾಥ್ ಗಲಾಟೆ ನಡೆಸಿದ್ದಾರೆ. ಘಟನೆ ಬಳಿಕ ಬಿಡಿಎ ಆಯುಕ್ತ ಮಹೇಶ್ವರ್ ರಾವ್ ಅವರು ತಕ್ಷಣವೇ ಮಂಜುನಾಥ್ ಅವರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿ, ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಸೂಚಿಸಿದ್ದಾರೆ. ಇಂತಹ ಪ್ರಕರಣಗಳು ಮರುಕಳಿಸಬಾರದು ಎಂದು ಆಯುಕ್ತರು ಗಂಭೀರ ಎಚ್ಚರಿಕೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.