ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್ ದಾಖಲೆ ಬರೆಯಲು ಮುಂದಾದ ಬಿಡಿಎ: ಮಾಹಿತಿ ಇಲ್ಲಿದೆ
ಬೆಂಗಳೂರನ್ನು ಮತ್ತೆ ಕೂಲ್ ಸಿಟಿಯನ್ನಾಗಿಸಲು ಮಹತ್ವಾಕಾಂಕ್ಷೆಯ 15 ಲಕ್ಷ ಸಸಿ ನೆಡುವ ಅಭಿಯಾನವನ್ನು ಬಿಡಿಎ ಹಮ್ಮಿಕೊಂಡಿದೆ. ಕೆಂಪೇಗೌಡ ಜಯಂತಿ ದಿನದಂದು ನಡೆಯುವ ಈ ಕಾರ್ಯಕ್ರಮದಲ್ಲಿ ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರಿಸ್, ಆಯುಕ್ತ ಮಣಿವಣ್ಣನ್ ನೇತೃತ್ವದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಬೆಂಬಲದೊಂದಿಗೆ ವಿವಿಧ ಇಲಾಖೆಗಳು, ಸಂಸ್ಥೆಗಳು ಹಾಗೂ ನಾಗರಿಕರು ಕೈಜೋಡಿಸುತ್ತಿದ್ದಾರೆ. 260 ಎಕರೆ ಪ್ರದೇಶದಲ್ಲಿ ಸ್ಥಳೀಯ ಸಸ್ಯಗಳನ್ನು ನೆಡುವ ಯೋಜನೆ ಹಮ್ಮಿಕೊಳ್ಳಲಾಗಿದೆ.
ಬೆಂಗಳೂರು, ಜೂನ್ 26: ಒಂದು ಕಾಲದಲ್ಲಿ ಕೂಲ್ ಸಿಟಿ ಎಂದೇ ಖ್ಯಾತವಾಗಿದ್ದ ಬೆಂಗಳೂರು ಈಗ ಹಾಟ್ ಸಿಟಿಯಾಗುತ್ತಿದೆ. ಈ ವಾತಾವರಣದ ಬದಲಾವಣೆಯನ್ನು ಗಮನಿಸಿರುವ ಬಿಡಿಎ, ನಗರವನ್ನು ಮತ್ತೆ ಹಸಿರಾಗಿಸಲು ಮಹತ್ವದ ಹೆಜ್ಜೆಯನ್ನಿಟ್ಟಿದೆ. ಕೆಂಪೇಗೌಡ ಜಯಂತಿ ದಿನದಂದು ಒಂದೇ ದಿನ 15 ಲಕ್ಷ ಸಸಿಗಳನ್ನು ನೆಡುವ ಬೃಹತ್ ಅಭಿಯಾನವನ್ನು ಹಮ್ಮಿಕೊಂಡಿದೆ. ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರಿಸ್ ಮತ್ತು ಆಯುಕ್ತ ಮಣಿವಣ್ಣನ್ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಸಹ ಇದಕ್ಕೆ ಸಂಪೂರ್ಣ ಬೆಂಬಲ ನೀಡಿದ್ದಾರೆ. ಅಭಿಯಾನ ಹೇಗೆ ನಡೆಯಲಿದೆ ಮತ್ತು ಎಷ್ಟು ಜನ ಭಗಿಯಾಗಲಿದ್ದಾರೆ ಎಂಬ ಬಗ್ಗೆ ಬಿಡಿಎ ಆಯುಕ್ತ ಮೇಜರ್ ಮಣಿವಣ್ಣನ್ ಪಿ. ಅವರು ನೀಡಿರುವ ಮಾಹಿತಿ ಈ ವಿಡಿಯೋದಲ್ಲಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
