ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್​​​ ಖಡಕ್​ ಸೂಚನೆ

Updated on: Jun 13, 2026 | 8:41 PM

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಅಧಿಕಾರಿಗಳ ಸಭೆ ನಡೆಸಿ ಸಾರ್ವಜನಿಕರಿಗೆ ಸ್ಪಂದಿಸುವಂತೆ ಸೂಚಿಸಿದರು. ಅಧಿಕಾರಿಗಳು 10 ಗಂಟೆಗೆ ಕಚೇರಿಗೆ ಹಾಜರಾಗಿ, ಬಯೋಮೆಟ್ರಿಕ್ ಮೂಲಕ ವರದಿ ಮಾಡಬೇಕು. ಎಲ್ಲ ಅಧಿಕಾರಿಗಳ ಸಂಪರ್ಕ ವಿವರಗಳು ಸಾರ್ವಜನಿಕರಿಗೆ ಲಭ್ಯವಿರಬೇಕು. ಜನಸ್ನೇಹಿ ಆಡಳಿತಕ್ಕೆ ಟೀಂ ಕರ್ನಾಟಕ ಪರಿಕಲ್ಪನೆಯಡಿ ಕೆಲಸ ಮಾಡಲು ಕರೆ ನೀಡಿದರು.

ಬೆಂಗಳೂರು, ಜೂನ್​ 13: ಸಿಎಂ ಡಿಕೆ ಶಿವಕುಮಾರ್​​ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯದ ಡಿಸಿ, ಎಸ್​​ಪಿ ಮತ್ತು ಸಿಇಒಗಳ ಜೊತೆ ಮಹತ್ವದ ಸಭೆ ಮಾಡಿದರು. ಸುಮಾರು ಏಳು ಗಂಟೆಗಳ ಕಾಲ ನಡೆದ ಸಭೆಯಲ್ಲಿ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಭಾಗವಹಿಸುವ ಎಲ್ಲ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್​, ರಾಜ್ಯದ ಜನರು ನಮ್ಮ ಮೇಲೆ ಬಹಳ ನಿರೀಕ್ಷೆಗಳನ್ನಿಟ್ಟಿದ್ದಾರೆ. ಕಚೇರಿಗಳಿಗೆ ಬಂದ ಜನರಿಗೆ ಅಧಿಕಾರಿಗಳು ಸ್ಪಂದಿಸಬೇಕು. ಹಾಗಾಗಿ ಎಲ್ಲ ಇಲಾಖೆಯ ಅಧಿಕಾರಿಗಳು ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಕಡ್ಡಾಯವಾಗಿ ಹಾಜರಿರಬೇಕು. ನಮ್ಮದು ಒಂದೇ ತಂಡ. ಕರ್ನಾಟಕಕ್ಕಾಗಿ ಕೆಲಸ ಮಾಡೋಣ ಎಂದು ಮನವಿ ಮಾಡಿದ್ದಾರೆ.

ವರದಿ: ಈರಣ್ಣ ಬಸವ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Jun 13, 2026 08:40 PM
Follow Us
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More