AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನದಿಗಳ ಜೋಡಣೆ ವಿರೋಧಿಸಿ ಯಲ್ಲಾಪುರದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ

ನದಿಗಳ ಜೋಡಣೆ ವಿರೋಧಿಸಿ ಯಲ್ಲಾಪುರದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ

ಅಶೋಕ್​ ಪೂಜಾರಿ
| Edited By: |

Updated on:Nov 03, 2026 | 2:55 PM

Share

ಉತ್ತರ ಕನ್ನಡ ಜಿಲ್ಲೆಯ ಪರಿಸರ ಮತ್ತು ಪಶ್ಚಿಮ ಘಟ್ಟದ ಅರಣ್ಯ ನಾಶಕ್ಕೆ ಕಾರಣವಾಗಲಿರುವ ಬೇಡ್ತಿ-ವರದಾ ನದಿ ಜೋಡಣೆ ಯೋಜನೆಯನ್ನು ವಿರೋಧಿಸಿ ಯಲ್ಲಾಪುರದಲ್ಲಿ ಸಾವಿರಾರು ಪ್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿದ್ದಾರೆ. ಬೇಡ್ತಿ-ವರದಾ ನದಿ ಜೋಡಣೆ ಯೋಜನೆಯಿಂದ ಬೃಹತ್ ಪ್ರಮಾಣದಲ್ಲಿ ಅರಣ್ಯ ನಾಶವಾಗುವ ಆತಂಕವನ್ನು ಪ್ರತಿಭಟನಾಕಾರರು ವ್ಯಕ್ತಪಡಿಸಿದ್ದಾರೆ.

ಉತ್ತರ ಕನ್ನಡ, ನವೆಂಬರ್​ 03:  ಬೇಡ್ತಿ-ವರದಾ, ಅಘನಾಶಿನಿ-ವೇದಾವತಿ ನದಿಗಳ ಜೋಡಣೆ ಯೋಜನೆ ವಿರೋಧಿಸಿ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ-52 ತಡೆದು ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಹೆದ್ದಾರಿ ತಡೆಗೂ ಮೊದಲು ಯಲ್ಲಾಪುರ ಪಟ್ಟಣದಲ್ಲಿ ಮೆರವಣಿಗೆ ನಡೆಸಲಾಗಿದೆ. ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ ಶಿವರಾಮ ಹೆಬ್ಬಾರ್, ಭೀಮಣ್ಣ ನಾಯ್ಕ, ದಿನಕರ ಶೆಟ್ಟಿ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಮೆರವಣಿಗೆಯಲ್ಲಿ ಭಾಗಿಯಾಗಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರೂ ಹೋರಾಟದಲ್ಲಿ ಭಾಗಿಯಾಗಿದ್ದು, ಸರ್ಕಾರ ಯೋಜನೆಯನ್ನ ಕೈಬಿಡಬಿಡಬೇಕೆಂದು ಒತ್ತಾಯಿಸಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Nov 03, 2026 02:48 PM

Follow Us
ಅಶೋಕ್​ ಪೂಜಾರಿ
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More