ನದಿಗಳ ಜೋಡಣೆ ವಿರೋಧಿಸಿ ಯಲ್ಲಾಪುರದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ
ಉತ್ತರ ಕನ್ನಡ ಜಿಲ್ಲೆಯ ಪರಿಸರ ಮತ್ತು ಪಶ್ಚಿಮ ಘಟ್ಟದ ಅರಣ್ಯ ನಾಶಕ್ಕೆ ಕಾರಣವಾಗಲಿರುವ ಬೇಡ್ತಿ-ವರದಾ ನದಿ ಜೋಡಣೆ ಯೋಜನೆಯನ್ನು ವಿರೋಧಿಸಿ ಯಲ್ಲಾಪುರದಲ್ಲಿ ಸಾವಿರಾರು ಪ್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿದ್ದಾರೆ. ಬೇಡ್ತಿ-ವರದಾ ನದಿ ಜೋಡಣೆ ಯೋಜನೆಯಿಂದ ಬೃಹತ್ ಪ್ರಮಾಣದಲ್ಲಿ ಅರಣ್ಯ ನಾಶವಾಗುವ ಆತಂಕವನ್ನು ಪ್ರತಿಭಟನಾಕಾರರು ವ್ಯಕ್ತಪಡಿಸಿದ್ದಾರೆ.
ಉತ್ತರ ಕನ್ನಡ, ನವೆಂಬರ್ 03: ಬೇಡ್ತಿ-ವರದಾ, ಅಘನಾಶಿನಿ-ವೇದಾವತಿ ನದಿಗಳ ಜೋಡಣೆ ಯೋಜನೆ ವಿರೋಧಿಸಿ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ-52 ತಡೆದು ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಹೆದ್ದಾರಿ ತಡೆಗೂ ಮೊದಲು ಯಲ್ಲಾಪುರ ಪಟ್ಟಣದಲ್ಲಿ ಮೆರವಣಿಗೆ ನಡೆಸಲಾಗಿದೆ. ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ ಶಿವರಾಮ ಹೆಬ್ಬಾರ್, ಭೀಮಣ್ಣ ನಾಯ್ಕ, ದಿನಕರ ಶೆಟ್ಟಿ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಮೆರವಣಿಗೆಯಲ್ಲಿ ಭಾಗಿಯಾಗಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರೂ ಹೋರಾಟದಲ್ಲಿ ಭಾಗಿಯಾಗಿದ್ದು, ಸರ್ಕಾರ ಯೋಜನೆಯನ್ನ ಕೈಬಿಡಬಿಡಬೇಕೆಂದು ಒತ್ತಾಯಿಸಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Nov 03, 2026 02:48 PM
Loading...
Unable to load recommendations.
Follow Us