ಹಾಸನ: ಮುಂದುವರೆದ ಬೀಟಮ್ಮ ಗ್ಯಾಂಗ್ ಹಾವಳಿ, ಕಾಫಿ, ಬಾಳೆ, ಭತ್ತ ಬೆಳೆ ನಾಶ
ಹಾಸನದ ತಾವರೆಕೆರೆಯಲ್ಲಿ 20ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಆತಂಕ ಸೃಷ್ಟಿಸಿದೆ. ಬೀಟಮ್ಮ ಗ್ಯಾಂಗ್ ಹಾವಳಿಯಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಕಾಫಿ, ಬಾಳೆ, ನಾಟಿ ಮಾಡಿದ ಭತ್ತ ಸೇರಿ ಅಪಾರ ಪ್ರಮಾಣದ ಬೆಳೆಯನ್ನು ಗಜಪಡೆ ನಾಶ ಮಾಡಿದೆ. ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಂಡುಹಿಡಿಯದ ಸರ್ಕಾರ ಹಾಗೂ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ.
ಹಾಸನ, ಸೆ.23: ಹಾಸನ ಜಿಲ್ಲೆಯಲ್ಲಿ ಬೀಟಮ್ಮ ಗ್ಯಾಂಗ್ ಹಾವಳಿ ಮುಂದುವರಿದಿದೆ. ಬೇಲೂರು ತಾಲೂಕಿನ ತಾವರೆಕೆರೆಯಲ್ಲಿ 20ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಆತಂಕ ಸೃಷ್ಟಿಸಿದೆ. ಕಾಡಾನೆಗಳು ಕಾಫಿ, ಬಾಳೆ, ಭತ್ತ ಬೆಳೆ ನಾಶ ಮಾಡಿವೆ. ಬೀಟಮ್ಮ ಗ್ಯಾಂಗ್ ಹಾವಳಿಯಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಕಾಡಾನೆಗಳನ್ನು ಅರಣ್ಯಕ್ಕೆ ಓಡಿಸಲು ಗ್ರಾಮಸ್ಥರು ಹರಸಾಹಸ ಪಡುತ್ತಿದ್ದಾರೆ. ಸರ್ಕಾರ ಹಾಗೂ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ