ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ; ಗುಂಪು ಆನೆಗಳ ಓಡಾಟದ ವಿಡಿಯೋ ವೈರಲ್
ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಬಿಕ್ಕೋಡು ಗ್ರಾಮದಲ್ಲಿ ಕಾಡಾನೆಗಳ ಹಿಂಡು ಎಂಟ್ರಿ ಕೊಟ್ಟಿದೆ. ಕಾಡಾನೆಗಳನ್ನು ಕಂಡು ಗ್ರಾಮಸ್ಥರು ಭಯಭೀತರಾಗಿದ್ದಾರೆ. ಕಾಡಾನೆಗಳ ಗುಂಪನ್ನು ಗ್ರಾಮದಿಂದ ಓಡಿಸಿ ನಮ್ಮ ಫಸಲನ್ನು ರಕ್ಷಿಸಿ ಎಂದು ರೈತರು ಮನವಿ ಮಾಡಿದ್ದಾರೆ. ಅರಣ್ಯ ಇಲಾಖೆಗೆ ಕಾಡಾನೆಗಳನ್ನು ಓಡಿಸುವಂತೆ ಮನವಿ ಮಾಡಿದ್ದಾರೆ.
ಹಾಸನ, ಸೆ.16: ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಬಿಕ್ಕೋಡು ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಒಂದು ಕಡೆ ದೈತ್ಯಾಕಾರದ ಒಂಟಿ ಸಲಗ ಎಂಟ್ರಿಯಾಗಿದೆ. ಇನ್ನೊಂದೆಡೆ ಗ್ರಾಮದೊಳಗೆಲ್ಲಾ ಕಾಡಾನೆಗಳ ಹಿಂಡು ಓಡಾಡುತ್ತಿದೆ. ಕಾಡಾನೆಗಳನ್ನು ಕಂಡು ಗ್ರಾಮಸ್ಥರು ಭಯಭೀತರಾಗಿದ್ದಾರೆ. ಬೆಳಿಗ್ಗೆ ಸಂಜೆ ಗ್ರಾಮಕ್ಕೆ ಗಜಪಡೆ ಬರುತ್ತಿವೆ. ಬೇಲೂರು ತಾಲ್ಲೂಕಿನಲ್ಲಿ ಬೀಟಮ್ಮ ಗ್ಯಾಂಗ್ ಹಾವಳಿ ಮಿತಿಮೀರಿದೆ. ಇದರಿಂದ ಜನರು ಆಚೆ ಹೋಗಲು ಕೂಡ ಭಯಪಡುವಂತಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ