Video: ಸೂರತ್​ನಲ್ಲಿ ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್

Updated on: Jan 21, 2026 | 7:52 AM

ಗುಜರಾತ್‌ನ ಸೂರತ್ ಜಿಲ್ಲೆಯಲ್ಲಿ 21 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ನೀರಿನ ಟ್ಯಾಂಕ್ ಉದ್ಘಾಟನೆಗೂ ಮುನ್ನವೇ ಕುಸಿದುಬಿದ್ದಿದೆ. ಸೂರತ್ ಜಿಲ್ಲೆಯ 33 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಗುರಿಯನ್ನು ಹೊಂದಿರುವ ಯೋಜನೆಗೆ ದೊಡ್ಡ ಹಿನ್ನಡೆಯಾಗಿದೆ. ಈ ಘಟನೆ ಭ್ರಷ್ಟಾಚಾರ ವಿವಾದಕ್ಕೆ ನಾಂದಿ ಹಾಡಿದ್ದು, ನೀರಿನ ಟ್ಯಾಂಕ್ ನಿರ್ಮಿಸಲು ಬಳಸಿದ ನಿರ್ಮಾಣ ಸಾಮಗ್ರಿಗಳ ಗುಣಮಟ್ಟದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಸೂರತ್, ಜನವರಿ 21: ಗುಜರಾತ್‌ನ ಸೂರತ್ ಜಿಲ್ಲೆಯಲ್ಲಿ 21 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ನೀರಿನ ಟ್ಯಾಂಕ್ ಉದ್ಘಾಟನೆಗೂ ಮುನ್ನವೇ ಕುಸಿದುಬಿದ್ದಿದೆ. ಸೂರತ್ ಜಿಲ್ಲೆಯ 33 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಗುರಿಯನ್ನು ಹೊಂದಿರುವ ಯೋಜನೆಗೆ ದೊಡ್ಡ ಹಿನ್ನಡೆಯಾಗಿದೆ. ಈ ಘಟನೆ ಭ್ರಷ್ಟಾಚಾರ ವಿವಾದಕ್ಕೆ ನಾಂದಿ ಹಾಡಿದ್ದು, ನೀರಿನ ಟ್ಯಾಂಕ್ ನಿರ್ಮಿಸಲು ಬಳಸಿದ ನಿರ್ಮಾಣ ಸಾಮಗ್ರಿಗಳ ಗುಣಮಟ್ಟದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಜನವರಿ 19 ರಂದು ಪ್ರಾಯೋಗಿಕ ಚಾಲನೆಯ ಸಮಯದಲ್ಲಿ 11 ಲಕ್ಷ ಲೀಟರ್ ಸಾಮರ್ಥ್ಯದ 15 ಮೀಟರ್ ಎತ್ತರದ ನೀರಿನ ಟ್ಯಾಂಕ್ ಕುಸಿದು ಬಿದ್ದಿದ್ದು, ಆ ಪ್ರದೇಶದಲ್ಲಿ ಭೀತಿ ಮತ್ತು ಸ್ಥಳೀಯ ನಿವಾಸಿಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿತ್ತು.ಅಧಿಕಾರಿಗಳ ಪ್ರಕಾರ, ಸುಮಾರು ಮಧ್ಯಾಹ್ನ 12 ಗಂಟೆಗೆ ಪರೀಕ್ಷೆಗಾಗಿ ಸುಮಾರು 9 ಲಕ್ಷ ಲೀಟರ್ ನೀರನ್ನು ಟ್ಯಾಂಕ್‌ಗೆ ತುಂಬಿಸಲಾಯಿತು, ಆಗ ಇದ್ದಕ್ಕಿದ್ದಂತೆ ಟ್ಯಾಂಕ್ ಕುಸಿದಿದೆ. ಮೂವರು ಕಾರ್ಮಿಕರು ಗಾಯಗೊಂಡಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ