ಕೀಟನಾಶಕ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕೀಟನಾಶಕ ಮಿಶ್ರಿತ ನೀರನ್ನು ಕುಡಿದ 12 ಮಕ್ಕಳು ಅಸ್ವಸ್ಥರಾಗಿದ್ದಾರೆ. ಶಾಲೆಯ ನೀರಿನ ಟ್ಯಾಂಕ್‌ನಲ್ಲಿ ಕೀಟನಾಶಕ ಕಂಡುಬಂದಿದೆ ಎಂದು ಶಾಲಾ ಸಿಬ್ಬಂದಿ ಅನುಮಾನ ವ್ಯಕ್ತಪಡಿಸಿದ್ದಾರೆ. ಮಕ್ಕಳನ್ನು ಸವದತ್ತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಅವರ ಆರೋಗ್ಯ ಸ್ಥಿತಿ ಚೇತರಿಕೆಯಲ್ಲಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಳಗಾವಿ, ಜುಲೈ 14: ಕೀಟನಾಶಕ ಮಿಶ್ರಿತ ನೀರು ಕುಡಿದು ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ 12 ಮಂದಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಶಾಲೆಯ ನೀರಿನ ಟ್ಯಾಂಕ್ಗೆ ಯಾರೋ ಕೀಟನಾಶಕ ಬೆರೆಸಿದ್ದಾರೆ ಎಂದು ಶಾಲಾ ಸಿಬ್ಬಂದಿ ಅನುಮಾನ ವ್ಯಕ್ತಪಡಿಸಿದ್ದಾರೆ. ಅಸ್ವಸ್ಥಗೊಂಡಿದ್ದ 12 ಮಂದಿ ಮಕಳ್ಳನ್ನು ಸವದತ್ತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಡಿಹೆಚ್ಒ ಈಶ್ವರ್ ಗಡಾದ್, ಡಿಡಿಪಿಐ ಲೀಲಾವತಿ ಹಿರೇಮಠ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದDHO ಗಡಾದ್ 12 ಮಂದಿ ಮಕ್ಕಳ ಆರೋಗ್ಯ ಸದ್ಯ ಚೇತರಿಕೆ ಕಂಡುಬಂದಿದೆ. ಪೊಲೀಸರು ತನಿಖೆ ಮಾಡುತ್ತಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ
Published on: Jul 14, 2025 06:20 PM
Follow Us
Latest Videos
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ್ಯಾಪಿಡೋ ಆ್ಯಪ್ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
