ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ

Edited By:

Updated on: Jul 14, 2025 | 6:21 PM

ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕೀಟನಾಶಕ ಮಿಶ್ರಿತ ನೀರನ್ನು ಕುಡಿದ 12 ಮಕ್ಕಳು ಅಸ್ವಸ್ಥರಾಗಿದ್ದಾರೆ. ಶಾಲೆಯ ನೀರಿನ ಟ್ಯಾಂಕ್‌ನಲ್ಲಿ ಕೀಟನಾಶಕ ಕಂಡುಬಂದಿದೆ ಎಂದು ಶಾಲಾ ಸಿಬ್ಬಂದಿ ಅನುಮಾನ ವ್ಯಕ್ತಪಡಿಸಿದ್ದಾರೆ. ಮಕ್ಕಳನ್ನು ಸವದತ್ತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಅವರ ಆರೋಗ್ಯ ಸ್ಥಿತಿ ಚೇತರಿಕೆಯಲ್ಲಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಳಗಾವಿ, ಜುಲೈ 14: ಕೀಟನಾಶಕ‌ ಮಿಶ್ರಿತ ನೀರು ಕುಡಿದು ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ 12 ಮಂದಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಶಾಲೆಯ ನೀರಿನ ಟ್ಯಾಂಕ್​​​​​ಗೆ ಯಾರೋ ಕೀಟನಾಶಕ ಬೆರೆಸಿದ್ದಾರೆ ಎಂದು ಶಾಲಾ ಸಿಬ್ಬಂದಿ ಅನುಮಾನ ವ್ಯಕ್ತಪಡಿಸಿದ್ದಾರೆ. ಅಸ್ವಸ್ಥಗೊಂಡಿದ್ದ 12 ಮಂದಿ ಮಕಳ್ಳನ್ನು ಸವದತ್ತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಡಿಹೆಚ್​ಒ ಈಶ್ವರ್ ಗಡಾದ್,‌ ಡಿಡಿಪಿಐ ಲೀಲಾವತಿ ಹಿರೇಮಠ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದDHO ಗಡಾದ್ 12 ಮಂದಿ ಮಕ್ಕಳ ಆರೋಗ್ಯ ಸದ್ಯ ಚೇತರಿಕೆ ಕಂಡುಬಂದಿದೆ. ಪೊಲೀಸರು ತನಿಖೆ ಮಾಡುತ್ತಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Published on: Jul 14, 2025 06:20 PM