ಸಾಂಬ್ರಾ ವಿಮಾನ ನಿಲ್ದಾಣಕ್ಕೆ 4-ಲೇನ್ ರಸ್ತೆ ಆಗಬೇಕಿದೆ, ಜಾರಕಿಹೊಳಿ ಜೊತೆ ಚರ್ಚೆ ಆಗಿದೆ: ಜಗದೀಶ್ ಶೆಟ್ಟರ್
ಬೆಳಗಾವಿ ವಿಮಾನ ನಿಲ್ದಾಣ ಅಭಿವೃದ್ಧಿಯ ಬಗ್ಗೆ ಮಾತಾಡಿದ ಸಂಸದ ಜಗದೀಶ್ ಶೆಟ್ಟರ್, ಸಾಂಬ್ರಾ ವಿಮಾನ ನಿಲ್ದಾಣಕ್ಕೆ 4-ಲೇನ್ ರಸ್ತೆ ಮಾಡುವ ಅವಶ್ಯಕತೆಯಿದೆ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಲೋಕೋಪಯೋಗಿ ಖಾತೆಯನ್ನೂ ಹೊಂದಿರುವುದರಿಂದ ಭೂ ಸ್ವಾಧೀನ ಪ್ರಕ್ರಿಯೆ ಬೇಗ ಆರಂಭವಾಗಲಿದೆ ಮತ್ತು ವಂದೇ ಭಾರತ್ ರೈಲು ಸೇವೆಗೆ ಸಂಬಂಧಿಸಿದ ಮತುಕತೆ ಮುಗಿದಿದ್ದು, ಶೀಘ್ರದಲ್ಲಿ ಸೇವೆ ಶುರುವಾಗಲಿದೆ ಎಂದು ಹೇಳಿದರು.
ಬೆಳಗಾವಿ, ಫೆ. 28: ನಗರದಲ್ಲಿಂದು ಸುದ್ದಿಗೋಷ್ಠಿಯೊಂದನ್ನು ನಡೆಸಿ ಮಾತಾಡಿದ ಸಂಸದ ಜಗದೀಶ್ ಶೆಟ್ಟರ್, ರಾಜ್ಯ ವಸತಿ ಸಚಿವ ಬಿಜೆಡ್ ಜಮೀರ್ ಅಹ್ಮದ್ ಖಾನ್ (BZ Zameer Ahmed Khan) ಆಡಿರುವ ಮಾತಿಗಳನ್ನು ಗೇಲಿ ಮಾಡಿದರು. ಬಿಜೆಪಿ ಮತ್ತು ಜೆಡಿಎಸ್ ಶಾಸಕರು ತಮ್ಮ ಸಂಪರ್ಕದಲ್ಲಿದ್ದಾರೆ, ಅದಷ್ಟು ಬೇಗ ಅವರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಜಮೀರ್ ಅಹ್ಮದ್ ಹೇಳಿರುವುದಕ್ಕೆ ಪ್ರತಿಕ್ರಿಯಿಸಿದ ಶೆಟ್ಟರ್, ಕಾಂಗ್ರೆಸ್ ಪಕ್ಷದಿಂದಲೇ ಕೆಲ ನಾಯಕರು ಹೊರಬೀಳುವ ಸಿದ್ಧತೆಯಲ್ಲಿರುವಾಗ ಜಮೀರ್ ಆಡುವ ಮಾತಿಗೆ ಏನಾದರೂ ಬೆಲೆ ಇದೆಯೇ ಎಂದು ನಗುತ್ತಾ ಹೇಳಿದರು. ಅವರು ಕೆಲ ನಾಯಕರು ಅಂತ ಯಾರನ್ನು ಉದ್ದೇಶಿಸಿ ಹೇಳಿದರೋ?
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಹಸು ಕೆಚ್ಚಲು ಕೊಯ್ದ ಪ್ರಕರಣ: ಜಮೀರ್ ಅಹ್ಮದ್ ಹೇಳಿಕೆಗೆ ಚೈತ್ರಾ ಕುಂದಾಪುರ ತಿರುಗೇಟು
Latest Videos

Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್

ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್

ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ

ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್ಗೆ ಅಗಿಲ್ಲ: ಯತೀಂದ್ರ
