Live: ಬೆಳಗಾವಿ ಗಾಂಧಿ ಭಾರತ ಸಮಾವೇಶ ನೇರ ಪ್ರಸಾರ
ಬೆಳಗಾವಿಯಲ್ಲಿ ಕಾಂಗ್ರೆಸ್ ಶಕ್ತಿಪ್ರದರ್ಶನ ಆರಂಭವಾಗಿದೆ. ಗಾಂಧಿ ಭಾರತ ಹೆಸರಿನಲ್ಲಿ ಬೃಹತ್ ಸಮಾವೇಶ ನಡೆಯುತ್ತಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ಸೇರಿದಂತೆ ಘಟಾನುಘಟಿ ನಾಯಕರು ಭಾಗವಹಿಸುತ್ತಿದ್ದಾರೆ. ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಹೆಸರಿನಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಕಾರ್ಯಕ್ರಮದ ನೇರ ಪ್ರಸಾರ ಇಲ್ಲಿದೆ.
ಬೆಳಗಾವಿ, ಜನವರಿ 21: ಮಹಾತ್ಮಾ ಗಾಂಧೀಜಿ ಅಧ್ಯಕ್ಷತೆಯಲ್ಲಿ 1924 ರಲ್ಲಿ ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್ ಅಧಿವೇಶನಕ್ಕೆ ನೂರು ವರ್ಷ ತುಂಬಿದೆ. ಹೀಗಾಗಿ ಕಳೆದ ಡಿಸೆಂಬರ್ 26 ಮತ್ತು 27ರಂದು ಬೆಳಗಾವಿಯಲ್ಲಿ ಗಾಂಧಿ ಭಾರತ ಸಮಾವೇಶ ಆಯೋಜಿಸಲಾಗಿತ್ತು. ಆದರೆ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ನಿಧನರಾದ ಕಾರಣ ಕಾರ್ಯಕ್ರಮ ಮುಂದೂಡಿಕೆ ಮಾಡಲಾಗಿತ್ತು. ಈಗ ಆ ದಿನದ ಕಾರ್ಯಕ್ರಮ ಮತ್ತೆ ಆಯೋಜಿಸಲಾಗಿದೆ. ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಹೆಸರಿನಲ್ಲಿ ಸಮಾವೇಶ ನಡೆಯುತ್ತಿದ್ದು, ಕಾರ್ಯಕ್ರಮದ ಲೈವ್ ವಿಡಿಯೋ ಇಲ್ಲಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ