ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು: ಮೈ ಜುಮ್ಮೆನಿಸುವ ಸಿಸಿಟಿವಿ ವಿಡಿಯೋ

Edited By:

Updated on: Dec 27, 2025 | 2:38 PM

ಬೀದಿನಾಯಿಗಳ ಅಟ್ಟಹಾಸಕ್ಕೆ ಬೆಳಗಾವಿ ಜನ ನಲುಗಿ ಹೋಗಿದ್ದಾರೆ. ರಸ್ತೆಯಲ್ಲಿ ಹೋಗುವುದಕ್ಕೂ ಹಿಂದೇಟು ಹಾಕುವಂತಾಗಿದೆ. ಒಬ್ಬೊಬ್ಬರೇ ರಸ್ತೆ ಮೇಲೆ ಕಾಲಿಡುವಂತೆಯೇ ಇಲ್ಲ. ಜೋಶಿಮಾಳ ಏರಿಯಾದಲ್ಲಿರುವ ಜನರಿಗೆ ಬೀದಿನಾಯಿಗಳ ಹಾವಳಿ ಮಿತಿಮೀರಿದೆ. ಪಡೆ ಕಟ್ಟಿಕೊಂಡು ಬೀದಿನಾಯಿಗಳ ಗ್ಯಾಂಗ್ ಅಟ್ಯಾಕ್ ಮಾಡೋ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿಡಿಯೋ ಇಲ್ಲಿದೆ.

ಬೆಳಗಾವಿ, ಡಿಸೆಂಬರ್ 27: ದಂಪತಿ ತಮ್ಮ ಪಾಡಿಗೆ ತಾವು ಮಕ್ಕಳೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಬೀದಿ ನಾಯಿಗಳು ಏಕಾಏಕಿ ದಾಳಿ ಮಾಡಿದ ಘಟನೆ ಬೆಳಗಾವಿ ನಗರದ ಜೋಶಿಮಾಳಾದಲ್ಲಿ ನಡೆದಿದೆ. ಆರಂಭದಲ್ಲಿ ಒಂದೆರಡು ನಾಯಿಗಳಷ್ಟೇ ಕಾಣ್ತಿವೆ. ಆದರೆ, ಉಳಿದ ಬೀದಿನಾಯಿಗಳ ಪಡೆ ಅದೆಲ್ಲಿದ್ದವೋ ಏನೋ ಒಮ್ಮಿಂದೊಮ್ಮೆಲೇ ಪ್ರತ್ಯಕ್ಷವಾಗಿ ದಂಪತಿ ಮತ್ತು ಮಕ್ಕಳನ್ನು ಸುತ್ತುವರಿದಿವೆ. ಬೀದಿನಾಯಿಗಳು ಅಟ್ಟಹಾಸ ಮೆರೆಯುತ್ತಿತಿದ್ದಂತೆಯೇ ಬೆಚ್ಚಿದ ಪುಟ್ಟ ಮಗು, ಕಿರುಚಾಡತೊಡಗಿದೆ. ಇನ್ನು, ತಂದೆ ನಾಯಿಗಳನ್ನು ಓಡಿಸಿದ್ದಾರೆ. ಕೂದಲೆಳೆ ಅಂತರದಲ್ಲಿ ದಂಪತಿ ಮತ್ತು ಮಕ್ಕಳು ಪಾರಾಗಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More