ಬೆಳಗಾವಿ: ಉಕ್ಕಿ ಹರಿಯುತ್ತಿರುವ ಮಲಪ್ರಭಾ, ನದಿ ತೀರದಲ್ಲಿ ಕಾಣಿಸಿಕೊಂಡ ಮೊಸಳೆ

ಬೆಳಗಾವಿ: ಉಕ್ಕಿ ಹರಿಯುತ್ತಿರುವ ಮಲಪ್ರಭಾ, ನದಿ ತೀರದಲ್ಲಿ ಕಾಣಿಸಿಕೊಂಡ ಮೊಸಳೆ

Sahadev Mane
| Updated By: ವಿವೇಕ ಬಿರಾದಾರ

Updated on: Jul 28, 2024 | 10:52 AM

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮಾಟೋಳ್ಳಿ ಗ್ರಾಮದ ಮಲಪ್ರಭಾ ನದಿ ತೀರದಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷವಾಗಿದೆ. ಸುಮಾರು 10 ಅಡಿ ಉದ್ದದ ಮೊಸಳೆ ಕಂಡು ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಮತ್ತೊಂದು ಕಡೆ ಮೂಡಲಗಿ ತಾಲೂಕಿನ ಸುಣಧೋಳಿ ಗ್ರಾಮದ ಜಡಿಸಿದ್ದೇಶ್ವರ ದೇವಸ್ಥಾನದ ಆವರಣದ ಒಳಗೆ ಘಟಪ್ರಭಾ ನದಿ ನೀರು ನುಗ್ಗಿದೆ.

ಬೆಳಗಾವಿ, ಜುಲೈ 28: ಮಹಾರಾಷ್ಟ್ರದ (Maharashtra) ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಬೆಳಗಾವಿ (Belagavi) ಜಿಲ್ಲೆಯ ಸಪ್ತ ನದಿಗಳಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಬೈಲಹೊಂಗಲ (Bailhongal) ತಾಲೂಕಿನ ಮಾಟೋಳ್ಳಿ ಗ್ರಾಮದ ಮಲಪ್ರಭಾ ನದಿ ತೀರದಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷವಾಗಿದೆ. ಸುಮಾರು 10 ಅಡಿ ಉದ್ದದ ಮೊಸಳೆ ಕಂಡು ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಇದೇ ಮೊಸಳೆ ನಾಲ್ಕು ದಿನಗಳ ಹಿಂದೆ ವೇದಗಂಗಾ ನದಿಯಲ್ಲಿ ಕಾಣಿಸಿಕೊಂಡಿತ್ತು. ಮೊಸಳೆ ಓಡಾಟದ ದೃಶ್ಯ ಸ್ಥಳೀಯರೊಬ್ಬರ ಮೊಬೈಲ್​ನಲ್ಲಿ ಸೆರೆಯಾಗಿದೆ.

ಮತ್ತೊಂದು ಕಡೆ ಮೂಡಲಗಿ ತಾಲೂಕಿನ ಸುಣಧೋಳಿ ಗ್ರಾಮದ ಜಡಿಸಿದ್ದೇಶ್ವರ ದೇವಸ್ಥಾನದ ಆವರಣದ ಒಳಗೆ ಘಟಪ್ರಭಾ ನದಿ ನೀರು ನುಗ್ಗಿದೆ. ಮನೆಗಳಿಗೆ ನೀರು ನುಗ್ಗುವ ಆತಂಕದಲ್ಲಿ ಗ್ರಾಮಸ್ಥರು ಇದ್ದಾರೆ.

ಇದನ್ನೂ ಓದಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್, ದೋಣಿಯಲ್ಲಿ ಜನರ ಸ್ಥಳಾಂತರ; ಇಲ್ಲಿದೆ ಫೋಟೋಸ್​​​

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ