ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಜಾರಕಿಹೊಳಿ-ಸವದಿ ಬಣದ ಬೆಂಬಲಿಗರ ನಡುವೆ ಹೊಡೆದಾಟ
ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರ ಸ್ಥಾನಕ್ಕೆ ಮತದಾನ ವೇಳೆ ಹೈಡ್ರಾಮಾವೇ ನಡೆದಿದ್ದು, ಜಾರಕಿಹೊಳಿ ಮತ್ತು ಸವದಿ ಬಣದ ಬೆಂಬಲಿಗರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಡಿಸಿಪಿ ನಾರಾಯಣ ಭರಮನಿ ಚುನಾವಣಾಧಿಕಾರಿಗೆ ದೂರು ನೀಡುವಂತೆ ಸವದಿ ಬೆಂಬಲಿಗರ ಮನವೊಲಿಕೆ ಮಾಡಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಹಿನ್ನೆಲೆ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಬೆಳಗಾವಿ, ಅಕ್ಟೋಬರ್ 19: ಡಿಸಿಸಿ ಬ್ಯಾಂಕ್ (DCC Bank) ನಿರ್ದೇಶಕರ ಸ್ಥಾನಕ್ಕೆ ಮತದಾನ ವೇಳೆ ಹೈಡ್ರಾಮಾವೇ ನಡೆದಿದ್ದು, ಜಾರಕಿಹೊಳಿ ಮತ್ತು ಸವದಿ ಬಣದ ಬೆಂಬಲಿಗರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಮತದಾನ ಮಾಡಲು 40 ಡೆಲಿಗೇಷನ್ ಫಾರಂ ಕೊಡ್ತಿಲ್ಲ ಎಂದು ಜಾರಕಿಹೊಳಿ ಪೆನಲ್‌ನ ಅಭ್ಯರ್ಥಿ ಅಪ್ಪಾಸಾಹೇಬ್ ವಿರುದ್ಧ ಆರೋಪಿಸಿ ಬಸನಗೌಡ ಆಸಂಗಿ ಬೆಂಬಲಿಗರು ಬೆಳಗಾವಿಯ ಖಾಸಗಿ ಹೋಟೆಲ್‌ಗೆ ನುಗ್ಗಿದ್ದಾರೆ. ಲಕ್ಷ್ಮಣ ಸವದಿ-ಕತ್ತಿ ಬಣದ ಬಸನಗೌಡ ಆಸಂಗಿ ರಾಯಬಾಗ ತಾಲೂಕಿನಿಂದ ನಿರ್ದೇಶಕ ಸ್ಥಾನಕ್ಕೆ ಕಣಕ್ಕಿಳಿದಿದ್ದು, ಹೋಟೆಲ್ ಮುಂದೆ ಮಾರಾಮಾರಿ ನಡೆದಿದೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಡಿಸಿಪಿ ನಾರಾಯಣ ಭರಮನಿ ಚುನಾವಣಾಧಿಕಾರಿಗೆ ದೂರು ನೀಡುವಂತೆ ಸವದಿ ಬೆಂಬಲಿಗರ ಮನವೊಲಿಕೆ ಮಾಡಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಹಿನ್ನೆಲೆ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
