ಬೆಳಗಾವಿ ಡಿಸಿಸಿ ಬ್ಯಾಂಕ್​ ಚುನಾವಣೆ: ಜಾರಕಿಹೊಳಿ‌-ಸವದಿ ಬಣದ ಬೆಂಬಲಿಗರ ನಡುವೆ ಹೊಡೆದಾಟ

Edited By:

Updated on: Oct 19, 2025 | 3:44 PM

ಬೆಳಗಾವಿ ಡಿಸಿಸಿ ಬ್ಯಾಂಕ್​ ನಿರ್ದೇಶಕರ ಸ್ಥಾನಕ್ಕೆ ಮತದಾನ ವೇಳೆ ಹೈಡ್ರಾಮಾವೇ ನಡೆದಿದ್ದು, ಜಾರಕಿಹೊಳಿ‌ ಮತ್ತು ಸವದಿ ಬಣದ ಬೆಂಬಲಿಗರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಡಿಸಿಪಿ ನಾರಾಯಣ ಭರಮನಿ ಚುನಾವಣಾಧಿಕಾರಿಗೆ ದೂರು ನೀಡುವಂತೆ ಸವದಿ ಬೆಂಬಲಿಗರ ಮನವೊಲಿಕೆ ಮಾಡಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಹಿನ್ನೆಲೆ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಬೆಳಗಾವಿ, ಅಕ್ಟೋಬರ್​ 19: ಡಿಸಿಸಿ ಬ್ಯಾಂಕ್ (DCC Bank) ನಿರ್ದೇಶಕರ ಸ್ಥಾನಕ್ಕೆ ಮತದಾನ ವೇಳೆ ಹೈಡ್ರಾಮಾವೇ ನಡೆದಿದ್ದು, ಜಾರಕಿಹೊಳಿ‌ ಮತ್ತು ಸವದಿ ಬಣದ ಬೆಂಬಲಿಗರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.  ಮತದಾನ ಮಾಡಲು 40 ಡೆಲಿಗೇಷನ್ ಫಾರಂ ಕೊಡ್ತಿಲ್ಲ ಎಂದು ಜಾರಕಿಹೊಳಿ‌ ಪೆನಲ್‌ನ ಅಭ್ಯರ್ಥಿ ಅಪ್ಪಾಸಾಹೇಬ್ ವಿರುದ್ಧ ಆರೋಪಿಸಿ ಬಸನಗೌಡ ಆಸಂಗಿ ಬೆಂಬಲಿಗರು ಬೆಳಗಾವಿಯ ಖಾಸಗಿ ಹೋಟೆಲ್‌ಗೆ ನುಗ್ಗಿದ್ದಾರೆ. ಲಕ್ಷ್ಮಣ ಸವದಿ-ಕತ್ತಿ ಬಣದ ಬಸನಗೌಡ ಆಸಂಗಿ ರಾಯಬಾಗ ತಾಲೂಕಿನಿಂದ ನಿರ್ದೇಶಕ ಸ್ಥಾನಕ್ಕೆ ಕಣಕ್ಕಿಳಿದಿದ್ದು, ಹೋಟೆಲ್ ಮುಂದೆ ಮಾರಾಮಾರಿ ನಡೆದಿದೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಡಿಸಿಪಿ ನಾರಾಯಣ ಭರಮನಿ ಚುನಾವಣಾಧಿಕಾರಿಗೆ ದೂರು ನೀಡುವಂತೆ ಸವದಿ ಬೆಂಬಲಿಗರ ಮನವೊಲಿಕೆ ಮಾಡಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಹಿನ್ನೆಲೆ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More