ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ರಾಜಾರೋಷವಾಗಿ ಲಾಂಗು, ಮಚ್ಚು ಹಿಡಿದು ಓಡಾಡ್ತಿರುವ ಪುಢಾರಿಗಳು, ವಿಡಿಯೋ ವೈರಲ್

Edited By:

Updated on: Sep 17, 2025 | 10:43 AM

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಕಣ ಕಾವೇರಿದೆ. ಕತ್ತಿ ಮತ್ತು ಜಾರಕಿಹೊಳಿ‌ ಮಧ್ಯೆ ಪೈಪೋಟಿ ಇದ್ದು, ಸದಸ್ಯರನ್ನು ವಿರೋಧಿ ಬಣ ಕಿಡ್ನ್ಯಾಪ್ ಮಾಡದಂತೆ ತಡೆಯಲು ಪುಢಾರಿಗಳು ಲಾಂಗು, ಮಚ್ಚು ಹಿಡಿದು ಓಡಾಡುತ್ತಿದ್ದಾರೆ. ಬೆಲ್ಲದ ಬಾಗೇವಾಡಿಯಲ್ಲಿ ಫುಡಾರಿಗಳು ಲಾಂಗು ಮಚ್ಚು ಹಿಡಿದು ಓಡಾಡುತ್ತಿರುವ ವಿಡಿಯೋ ವೈರಲ್ ಆಗಿದೆ.

ಬೆಳಗಾವಿ, ಸೆಪ್ಟೆಂಬರ್ 17: ಬೆಳಗಾವಿಯಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆ ಹಿನ್ನೆಲೆ ಕೃಷಿ ಪತ್ತಿನ ಸಹಕಾರಿ ಸಂಘ ಸದಸ್ಯರ ಕಾವಲು ಕಾಯಲು ಪುಢಾರಿಗಳು ರಾಜಾರೋಷವಾಗಿ ಲಾಂಗು, ಮಚ್ಚು ಹಿಡಿದು ಓಡಾಡುತ್ತಿರುವುದು ಕಂಡುಬಂದಿದೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿರುವ ವಿಶ್ವರಾಜ್ ಶುಗರ್ಸ್ ಕಟ್ಟಡದ ಸುತ್ತಮುತ್ತ ಕಾವಲು ಫುಡಾರಿಗಳು ಲಾಂಗು, ಮಚ್ಚು ಹಿಡಿದು ಓಡಾಡುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಕತ್ತಿ, ಜಾರಕಿಹೊಳಿ‌ ನಡುವೆ ಜಿದ್ದಾಜಿದ್ದಿ ಇದೆ. ಸದಸ್ಯರನ್ನು ವಿರೋಧಿ ಬಣ ಕಿಡ್ನ್ಯಾಪ್ ಮಾಡಬಾರದೆಂದು ಈ ರೀತಿ ಕಾವಲು ಕಾಯುತ್ತಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ ಲಾಂಗು, ಮಚ್ಚು ಹಿಡಿದು ಓಡಾಡುತ್ತಿರುವವರ ವಿರುದ್ಧ ಕ್ರಮಕ್ಕೆ ಆಗ್ರಹ ವ್ಯಕ್ತವಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More