ಬೆಳಗಾವಿಯಲ್ಲಿ 28 ಕೃಷ್ಣಮೃಗಗಳ ಸಾವು: ತನಿಖೆ ಬಗ್ಗೆ ಸಚಿವ ಈಶ್ವರ್ ಖಂಡ್ರೆ ಮಾತು
ಬೆಳಗಾವಿಯ ಚೆನ್ನಮ್ಮ ಕಿರು ಮೃಗಾಲಯದಲ್ಲಿ 28 ಕೃಷ್ಣಮೃಗಗಳ ಸಾವು ಆತಂಕ ಮೂಡಿಸಿದೆ. ಬ್ಯಾಕ್ಟೀರಿಯಾ ಸೋಂಕಿನಿಂದ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಈ ಘಟನೆ ಕುರಿತು ಹಿರಿಯ ಅಧಿಕಾರಿಗಳಿಂದ ತನಿಖೆಗೆ ಆದೇಶಿಸಿರುವ ಸಚಿವ ಈಶ್ವರ ಖಂಡ್ರೆ, ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಬೆಂಗಳೂರು, ನವೆಂಬರ್ 15: ಬೆಳಗಾವಿಯಲ್ಲಿ 20ಕ್ಕೂ ಹೆಚ್ಚು ಕೃಷ್ಣಮೃಗಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಪ್ರತಿಕ್ರಿಯಿಸಿದ್ದು, ವಿಚಾರ ಕೇಳಿ ಬಹಳ ನೋವಾಯಿತು. ತಕ್ಷಣ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಏಕೆ ಹೀಗಾಯ್ತು ಎನ್ನುವುದರ ಬಗ್ಗೆ ತನಿಖೆ ಮಾಡಿ ವರದಿ ಕೊಡಲು ಸೂಚಿಸಿದ್ದೇನೆ. ಬ್ಯಾಕ್ಟೀರಿಯ ಇನ್ಫೆಕ್ಷನ್ನಿಂದ ಸಾವಾಗಿದೆ ಅಂತ ಪ್ರಾಥಮಿಕ ಮಾಹಿತಿ ಸಿಕ್ಕಿದೆ. ವರದಿ ಬಂದ ಬಳಿಕ ಏನಾಯ್ತು ಎನ್ನುವುದು ಗೊತ್ತಾಗುತ್ತೆ. ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮ ಆಗುತ್ತೆ. ನಮ್ಮ ಸರ್ಕಾರ ಅರಣ್ಯ ಸಂಪತ್ತು ಉಳಿಸಿಕೊಳ್ಳಲು ಬದ್ಧವಾಗಿದೆ ಎಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos

