ಬೆಳಗಾವಿ-ಧಾರವಾಡ ರೈಲು ವಿಳಂಬಕ್ಕೆ ಸಂತೋಷ್ ಲಾಡ್ ಕಾರಣ: ಸೋಮಣ್ಣ ಗಂಭೀರ ಆರೋಪ
ಬೆಳಗಾವಿ-ಧಾರವಾಡ ನಡುವೆ ನೇರ ರೈಲು ಮಾರ್ಗ ಯೋಜನೆ ವಿಳಂಬಕ್ಕೆ ರಾಜ್ಯ ಸರ್ಕಾರ ಹಾಗೂ ಸಚಿವ ಸಂತೋಷ್ ಲಾಡ್ ಕಾರಣ ಎಂದು ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಗಂಭೀರ ಆರೋಪ ಮಾಡಿದ್ದಾರೆ. ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದನ ಸೋಮಣ್ಣ, ನಾನು ಈಗಾಗಲೇ ಎರಡ್ಮೂರು ಬಾರಿ ಮಾತಾಡಿದ್ದೇನೆ. ನಾನು ಸಾಕಷ್ಟು ಬಾರಿ ಸಂಪರ್ಕಿಸಿದರೂ ಸಂತೋಷ್ ಲಾಡ್ ಸ್ಪಂದಿಸುತ್ತಿಲ್ಲ. ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್ ಕೂಡ ಮಾತನಾಡಿದ್ದಾರೆ. ನಾನೇ ಮತ್ತೊಂದು ಬಾರಿ ರಾಜ್ಯ ಸರ್ಕಾರದ ಜೊತೆ ಮಾತನಾಡುತ್ತೇನೆ ಎಂದರು
ಬೆಳಗಾವಿ, (ಸೆಪ್ಟೆಂಬರ್ 15): ಬೆಳಗಾವಿ-ಧಾರವಾಡ ನಡುವೆ ನೇರ ರೈಲು ಮಾರ್ಗ ಯೋಜನೆ ವಿಳಂಬಕ್ಕೆ ರಾಜ್ಯ ಸರ್ಕಾರ ಹಾಗೂ ಸಚಿವ ಸಂತೋಷ್ ಲಾಡ್ ಕಾರಣ ಎಂದು ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಗಂಭೀರ ಆರೋಪ ಮಾಡಿದ್ದಾರೆ. ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದನ ಸೋಮಣ್ಣ, ನಾನು ಈಗಾಗಲೇ ಎರಡ್ಮೂರು ಬಾರಿ ಮಾತಾಡಿದ್ದೇನೆ. ನಾನು ಸಾಕಷ್ಟು ಬಾರಿ ಸಂಪರ್ಕಿಸಿದರೂ ಸಂತೋಷ್ ಲಾಡ್ ಸ್ಪಂದಿಸುತ್ತಿಲ್ಲ. ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್ ಕೂಡ ಮಾತನಾಡಿದ್ದಾರೆ. ನಾನೇ ಮತ್ತೊಂದು ಬಾರಿ ರಾಜ್ಯ ಸರ್ಕಾರದ ಜೊತೆ ಮಾತನಾಡುತ್ತೇನೆ ಎಂದರು.
ಬೆಳಗಾವಿ ಜಿಲ್ಲೆಯಲ್ಲಿ ಈಗಾಗಲೇ ನೂರಕ್ಕೆ ನೂರರಷ್ಟು ಭೂಸ್ವಾಧೀನವಾಗಿದೆ. ಸಚಿವ ಸಂತೋಷ್ ಲಾಡ್ ಯಾಕೆ ಹೀಗೆ ಮಾಡುತ್ತಿದ್ದಾರೆಂದು ಗೊತ್ತಿಲ್ಲ.ಸಂತೋಷ್ ಲಾಡ್ ಸ್ಪಂದಿಸದಿದ್ದರೆ ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡುತ್ತೇವೆ. ನೇರ ರೈಲು ಯೋಜನೆಗೆ ಈಗಾಗಲೇ 937 ಕೋಟಿ ರೂ. ಹಣ ಮೀಸಲಿಡಲಾಗಿದೆ. ಸಚಿವ ಸಂತೋಷ್ ಲಾಡ್ ಇನ್ನೂ ಬೆಳೆಯಬೇಕು, ಹೀಗ್ಯಾಕೆ ಮಾಡ್ತಿದ್ದಾರೋ? ನಾನೇ ಸಂತೋಷ್ ಲಾಡ್ ಹುಡುಕಿಕೊಂಡು ಹೋಗಿ ಮಾತನಾಡುತ್ತೇನೆ. ಸಿಎಂ ಜೊತೆ ಮಾತಾಡಿದ್ದೇನೆ, ಡಿಸಿ ಜೊತೆ ಹತ್ತಾರು ಬಾರಿ ಮಾತನಾಡಿದ್ದೇನೆ. ಯಾಕೆ ಹೀಗೆ ಮಾಡುತ್ತಿದ್ದೀರಿ ಎಂದು ರಾಜ್ಯ ಸರ್ಕಾರ ತಿಳಿಸಬೇಕು. ಯಾವುದೇ ಕಾರಣಕ್ಕೂ ಬೆಳಗಾವಿ-ಧಾರವಾಡ ರೈಲು ಯೋಜನೆ ನಿಲ್ಲಿಸಲ್ಲ ಎಂದು ಸ್ಪಷ್ಟಪಡಿಸಿದರು.
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

