ಬೆಳಗಾವಿ ಜಿಲ್ಲಾ ಕೋರ್ಟ್‌ಗೆ ಬಾಂಬ್ ಬೆದರಿಕೆ: ಬಾಂಬ್ ನಿಷ್ಕ್ರಿಯ ದಳ, ಶ್ವಾನದಳದಿಂದ ಪರಿಶೀಲನೆ
ಬೆಳಗಾವಿ ಜಿಲ್ಲಾ ಕೋರ್ಟ್‌ಗೆ ಇ-ಮೇಲ್ ಮೂಲಕ ಬಂದಿದ್ದ ಬಾಂಬ್ ಬೆದರಿಕೆ ಹುಸಿಯೆಂದು ದೃಢಪಟ್ಟಿದೆ. ಬೆದರಿಕೆಯ ಬೆನ್ನಲ್ಲೇ ಕೋರ್ಟ್ ಸಿಬ್ಬಂದಿ ಮಾರ್ಕೆಟ್ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳದೊಂದಿಗೆ ಪೊಲೀಸರು ಪರಿಶೀಲನೆ ನಡೆಸಿದರು. ಕೆಲವು ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಬೆಳಗಾವಿ, ನವೆಂಬರ್ 26: ಬೆಳಗಾವಿ ಜಿಲ್ಲಾ ಕೋರ್ಟ್‌ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು ಕೆಲಕಾಲ ಆತಂಕಕ್ಕೆ ಕಾರಣವಾಯಿತು. ಕೋರ್ಟ್ ಕಟ್ಟಡವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಇ-ಮೇಲ್ ಸಂದೇಶ ಬಂದ ನಂತರ, ಕೋರ್ಟ್ ಆವರಣದಲ್ಲಿ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಈ-ಮೇಲ್ ಕುರಿತು ತಕ್ಷಣವೇ ಬೆಳಗಾವಿಯ ಮಾರ್ಕೆಟ್ ಠಾಣೆ ಪೊಲೀಸರಿಗೆ ಮಾಹಿತಿ ನೀಡಲಾಯಿತು.
ಮಾಹಿತಿ ತಿಳಿದ ಕೂಡಲೇ ಮಾರ್ಕೆಟ್ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದರು. ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳದೊಂದಿಗೆ ಪೊಲೀಸರು ಕೋರ್ಟ್ ಆವರಣದಲ್ಲಿ ವ್ಯಾಪಕ ಪರಿಶೀಲನೆ ನಡೆಸಿದರು. ಎರಡೂ ಕೋರ್ಟ್‌ಗಳ ಒಳಗೂ ಮತ್ತು ಹೊರಗೂ ಕೂಲಂಕಷವಾಗಿ ಪರಿಶೀಲಿಸಲಾಯಿತು. ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗದ ಕಾರಣ, ಬಾಂಬ್ ಬೆದರಿಕೆ ಹುಸಿ ಎಂದು ದೃಢಪಡಿಸಲಾಯಿತು. ಭದ್ರತಾ ಪಡೆಗಳ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ಕೋರ್ಟ್ ಆವರಣದಲ್ಲಿ ನೆಲೆಸಿದ್ದ ಆತಂಕ ನಿವಾರಣೆಯಾಯಿತು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

