ಬೆಳಗಾವಿ ಜಿಲ್ಲಾ ಕೋರ್ಟ್​ಗೆ ಬಾಂಬ್ ಬೆದರಿಕೆ: ಬಾಂಬ್ ನಿಷ್ಕ್ರಿಯ ದಳ, ಶ್ವಾನದಳದಿಂದ ಪರಿಶೀಲನೆ

Edited By:

Updated on: Nov 26, 2026 | 7:13 PM

ಬೆಳಗಾವಿ ಜಿಲ್ಲಾ ಕೋರ್ಟ್‌ಗೆ ಇ-ಮೇಲ್ ಮೂಲಕ ಬಂದಿದ್ದ ಬಾಂಬ್ ಬೆದರಿಕೆ ಹುಸಿಯೆಂದು ದೃಢಪಟ್ಟಿದೆ. ಬೆದರಿಕೆಯ ಬೆನ್ನಲ್ಲೇ ಕೋರ್ಟ್ ಸಿಬ್ಬಂದಿ ಮಾರ್ಕೆಟ್ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳದೊಂದಿಗೆ ಪೊಲೀಸರು ಪರಿಶೀಲನೆ ನಡೆಸಿದರು. ಕೆಲವು ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಬೆಳಗಾವಿ, ನವೆಂಬರ್ 26: ಬೆಳಗಾವಿ ಜಿಲ್ಲಾ ಕೋರ್ಟ್‌ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು ಕೆಲಕಾಲ ಆತಂಕಕ್ಕೆ ಕಾರಣವಾಯಿತು. ಕೋರ್ಟ್ ಕಟ್ಟಡವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಇ-ಮೇಲ್ ಸಂದೇಶ ಬಂದ ನಂತರ, ಕೋರ್ಟ್ ಆವರಣದಲ್ಲಿ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಈ-ಮೇಲ್ ಕುರಿತು ತಕ್ಷಣವೇ ಬೆಳಗಾವಿಯ ಮಾರ್ಕೆಟ್ ಠಾಣೆ ಪೊಲೀಸರಿಗೆ ಮಾಹಿತಿ ನೀಡಲಾಯಿತು.

ಮಾಹಿತಿ ತಿಳಿದ ಕೂಡಲೇ ಮಾರ್ಕೆಟ್ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದರು. ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳದೊಂದಿಗೆ ಪೊಲೀಸರು ಕೋರ್ಟ್ ಆವರಣದಲ್ಲಿ ವ್ಯಾಪಕ ಪರಿಶೀಲನೆ ನಡೆಸಿದರು. ಎರಡೂ ಕೋರ್ಟ್‌ಗಳ ಒಳಗೂ ಮತ್ತು ಹೊರಗೂ ಕೂಲಂಕಷವಾಗಿ ಪರಿಶೀಲಿಸಲಾಯಿತು. ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗದ ಕಾರಣ, ಬಾಂಬ್ ಬೆದರಿಕೆ ಹುಸಿ ಎಂದು ದೃಢಪಡಿಸಲಾಯಿತು. ಭದ್ರತಾ ಪಡೆಗಳ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ಕೋರ್ಟ್ ಆವರಣದಲ್ಲಿ ನೆಲೆಸಿದ್ದ ಆತಂಕ ನಿವಾರಣೆಯಾಯಿತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More