ಡಿಕೆಶಿ ಪಿಎಸ್ ಕಾರು ಅಪಘಾತ: ಬೈಕ್ ಸವಾರ ಸಾವು, ಗುದ್ದಿದ ರಭಸಕ್ಕೆ ಕಾರು ಪಲ್ಟಿ
ಡಿಸಿಎಂ ಡಿಕೆ ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿ ಕಾರು ಬೆಳಗಾವಿಯ ಸವದತ್ತಿ ಹೊರವಲಯದಲ್ಲಿ ಅಪಘಾತಕ್ಕೀಡಾಗಿದೆ. ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ರಭಸಕ್ಕೆ ಕಾರು ಪಲ್ಟಿಯಾಗಿದ್ದು, ಆಪ್ತ ಕಾರ್ಯದರ್ಶಿ ಮತ್ತು ಚಾಲಕನಿಗೆ ಗಾಯಗಳಾಗಿವೆ. ಯಲ್ಲಮ್ಮ ದರ್ಶನ ಮುಗಿಸಿ ಹಿಂತಿರುಗುವಾಗ ಈ ದುರ್ಘಟನೆ ಸಂಭವಿಸಿದೆ.
ಬೆಳಗಾವಿ, ಡಿಸೆಂಬರ್ 18: ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿ ರಾಜೇಂದ್ರ ಪ್ರಸಾದ್ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿಯ ಹೊರವಲಯದಲ್ಲಿ ನಡೆದಿದೆ. ಮಂಜುನಾಥ್ ಬೈರ್ನಟ್ಟಿ(30) ಸಾವನ್ನಪ್ಪಿರುವ ಬೈಕ್ ಸವಾರ. ಮೃತ ಮಂಜುನಾಥ್ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಒಡೆತನದ ಹರ್ಷಾ ಸಕ್ಕರೆ ಕಾರ್ಖಾನೆಗೆ ಕೆಲಸಕ್ಕೆ ಹೊರಟ್ಟಿದ್ದರು. ಅತ್ತ ರಾಜೇಂದ್ರ ಪ್ರಸಾದ್ ಕಾರು ಯಲ್ಲಮ್ಮನ ದರ್ಶನ ಪಡೆದು ವಾಪಸಾಗುವಾಗ ಅಪಘಾತ ಸಂಭವಿಸಿದೆ. ಕಾರು ಗುದ್ದಿದ ರಭಸಕ್ಕೆ ಮಂಜುನಾಥ್ ತಲೆಗೆ ಪೆಟ್ಟು ಬಿದ್ದು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ರಾಜೇಂದ್ರ ಪ್ರಸಾದ್ ಹಾಗೂ ಕಾರು ಚಾಲಕನಿಗೂ ಗಾಯಗಳಾಗಿದ್ದು, ಧಾರವಾಡ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
