ಮೀನು ರಪ್ತು ವಾಹನದಲ್ಲಿ ಅಕ್ರವಾಗಿ ಗೋವಾ ಲಿಕ್ಕರ್ ಸಾಗಾಟ: 35 ಲಕ್ಷ ಮೌಲ್ಯದ ಮದ್ಯ ವಶಕ್ಕೆ
ಬೆಳಗಾವಿ ಅಬಕಾರಿ ಇಲಾಖೆ ಅಧಿಕಾರಿಗಳು ಮೀನು ಸಾಗಿಸುವ ಕೋಲ್ಡ್ ಸ್ಟೋರೇಜ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 350 ಬಾಕ್ಸ್ ಗೋವಾ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಇದರ ಮೌಲ್ಯ 35.28 ಲಕ್ಷ ರೂ. ಆಗಿದೆ. ವಾಹನ ಸೇರಿ ಒಟ್ಟು 55.28 ಲಕ್ಷ ರೂ. ಮೌಲ್ಯದ ಸರಕು ವಶಪಡಿಸಿಕೊಳ್ಳಲಾಗಿದ್ದು, ಚಾಲಕ ಪರಾರಿಯಾಗಿದ್ದಾನೆ.
ಬೆಳಗಾವಿ, ನವೆಂಬರ್ 17: ಮೀನು ರಪ್ತು ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಗೋವಾ ಲಿಕ್ಕರ್ನ ಬೆಳಗಾವಿ ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಮೀನಿನ ಕೋಲ್ಡ್ ಸ್ಟೋರೇಜ್‌ನಲ್ಲಿ 350 ಬಾಕ್ಸ್ ಲಿಕ್ಕರ್ ಪತ್ತೆಯಾಗಿದ್ದು, ಇದರ ಅಂದಾಜು ಮೌಲ್ಯ 35.28 ಲಕ್ಷ ರೂಪಾಯಿ ಎನ್ನಲಾಗಿದೆ. ಬೆಳಗಾವಿ ಅಬಕಾರಿ ಅಪರ ಆಯುಕ್ತ ವೈ. ಮಂಜುನಾಥ ಮಾರ್ಗದರ್ಶನದಲ್ಲಿ ದಾಳಿ ನಡೆಸಲಾಗಿದ್ದು, ಮದ್ಯದ ಜೊತೆಗೆ ಸುಮಾರು 20 ಲಕ್ಷ ರೂಪಾಯಿ ಮೌಲ್ಯದ ವಾಹನವನ್ನೂ ಜಪ್ತಿ ಮಾಡಲಾಗಿದೆ. ಅಧಿಕಾರಿಗಳನ್ನು ಕಣ್ಣು ತಪ್ಪಿಸಲು ನೇರವಾಗಿ ಬೆಳಗಾವಿಗೆ ಬಾರದ ಖದೀಮರು, ಗೋವಾದಿಂದ ಮಹಾರಾಷ್ಟ್ರಕ್ಕೆ ತೆರಳಿ ಬಳಿಕ ಬೆಳಗಾವಿ ಮಾರ್ಗವಾಗಿ ಮಂಗಳೂರಿಗೆ ಸಂಚರಿಸುತ್ತಿದ್ದರು ಎನ್ನಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us

